ಆರೋಗ್ಯಜಿಲ್ಲಾಸುದ್ದಿ

ಕಮಲಾಪುರದಲ್ಲಿ ಉಚಿತ ಆರೋಗ್ಯ ಶಿಬಿರ: 131 ಜನರ ಆರೋಗ್ಯ ತಪಾಸಣೆ

ಪ್ರಜಾ ಸೇವೆ ಅಭಿಯಾನದ ಅಂಗವಾಗಿ ಆರೋಗ್ಯ ಇಲಾಖೆಯಿಂದ ಶಿಬಿರ; 14 ಅಹವಾಲುಗಳ ಸ್ವೀಕಾರ

ಕಲಬುರಗಿ, ಸೆ.5: ಪ್ರಜಾ ಸೇವೆ ಅಭಿಯಾನದ ಅಂಗವಾಗಿ ಕಮಲಾಪುರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶನಿವಾರ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಶಿಬಿರದಲ್ಲಿ ಒಟ್ಟು 131 ಸಾರ್ವಜನಿಕರು ಆರೋಗ್ಯ ತಪಾಸಣೆಯ ಸೌಲಭ್ಯ ಪಡೆದುಕೊಂಡರು. ಆರೋಗ್ಯ ಇಲಾಖೆಯ ವಿವಿಧ ಸೇವೆಗಳು ಹಾಗೂ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ 14 ಅಹವಾಲುಗಳನ್ನು ಸ್ವೀಕರಿಸಲಾಗಿದ್ದು, ಅವುಗಳನ್ನು ಪರಿಶೀಲಿಸಿ ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ವಿವಿಧ ಆರೋಗ್ಯ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಆರೋಗ್ಯ ಸೇವೆಗಳು, ಸರ್ಕಾರಿ ಆರೋಗ್ಯ ಯೋಜನೆಗಳು ಹಾಗೂ ಸಾರ್ವಜನಿಕರು ಪಡೆಯಬಹುದಾದ ಸೌಲಭ್ಯಗಳ ಕುರಿತು ಈ ಮೂಲಕ ಮಾಹಿತಿ ನೀಡಲಾಯಿತು.

ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ರವಿಕಾಂತಿ ಕ್ಯಾತನಾಳ, ತಾಲೂಕು ಆರೋಗ್ಯಾಧಿಕಾರಿ ಡಾ. ವೀರನಾಥ, ವೈದ್ಯ ಡಾ. ಸ್ಯಾಮುವೆಲ್ ಸೇರಿದಂತೆ 50ಕ್ಕೂ ಹೆಚ್ಚು ಆರೋಗ್ಯ ಇಲಾಖೆಯ ಸಿಬ್ಬಂದಿ ಶಿಬಿರದಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಹಾಗೂ ಅಗತ್ಯ ಸೇವೆಗಳನ್ನು ಒದಗಿಸಿದರು.

Related Articles

Leave a Reply

Your email address will not be published. Required fields are marked *

Back to top button