ಕಲಬುರಗಿಯಲ್ಲಿ ಸೆ.1ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯೋತ್ಸವ
ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಮಧ್ಯಾಹ್ನ 12ಕ್ಕೆ ಕಾರ್ಯಕ್ರಮ

ಕಲಬುರಗಿ, ಆ.29: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 1ರಂದು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆರ್ಯ ಈಡಿಗರ ಸಮಾಜ ಸಂಘದ ಜಿಲ್ಲಾ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜೇಶ್ ಗುತೇದಾರ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ನಿಟ್ಟೂರು (ಅಮೃತ) ಶ್ರೀ ನಾರಾಯಣಗುರು ಮಹಾಸಂಸ್ಥಾನದ ಪೀಠಾಧಿಪತಿ ರೇಣುಕಾನಂದ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಡಾ. ಅಜಯಸಿಂಗ್, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷೆ ಹಾಗೂ ಉತ್ತರ ಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಅವರು ಗೌರವ ಉಪಸ್ಥಿತಿ ವಹಿಸಲಿದ್ದಾರೆ. ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಸಂಸದರಾದ ರಾಧಾಕೃಷ್ಣ ದೊಡ್ಡಮನಿ, ಬೀದರ್ ಸಂಸದ ಸಾಗರ ಖಂಡ್ರೆ, ಶಾಸಕರಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ್ ಜಾಧವ್, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ. ನಮೋಶಿ, ಡಾ. ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ್, ತಿಮ್ಮಣ್ಣಪ್ಪ ಕಮಕನೂರ, ಜಗದೇವ ಗುತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೇಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ರಶೀದ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯದ್ ಮಹೆಮೂದ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಹಾಗೂ ಮಹಾಪೌರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಪ್ರಾದೇಶಿಕ ಆಯುಕ್ತ ಜಹೀರಾ ನಸೀಮ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಳಿನ್ ಅತುಲ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ ಹಾಗೂ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಖ್ಯಾತ ವಾಗ್ಮಿ ನಿಕೇತ್ ರಾಜ್ ಮೌರ್ಯ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ರಾಜೇಶ್ ಗುತೇದಾರ್ ತಿಳಿಸಿದರು.
ಅಂದು ಬೆಳಗ್ಗೆ ನಡೆಯುವ ಭವ್ಯ ಮೆರವಣಿಗೆಗೆ ಮಾಜಿ ಸಚಿವ ಮಾಲಿಕಯ್ಯ ಗುತೇದಾರ್ ಹಾಗೂ ಮಾಜಿ ಶಾಸಕ ಸುಭಾಷ್ ಆರ್. ಗುತೇದಾರ್ ಚಾಲನೆ ನೀಡಲಿದ್ದಾರೆ. ಎಸ್.ಎಂ. ಪಂಡಿತ್ ರಂಗಮಂದಿರದ ಆವರಣದಲ್ಲಿ ನಡೆಯುವ ಉಚಿತ ಆರೋಗ್ಯ ಶಿಬಿರಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಿತಿನ್ ಗುತೇದಾರ್ ಹಾಗೂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತೇದಾರ್ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಶೋಕ್ ಕಲಾಲ್, ಆನಂದ ಗುತೇದಾರ್, ಮಹೇಶ್ ಗುತೇದಾರ್, ಪ್ರಭು ಗುತೇದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.



