ನಾಡಿನ ಪ್ರಗತಿ ಹಾಗೂ ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರ ಕೊಡುಗೆ ಅನನ್ಯಶಾಸಕ ಅಲ್ಲಮಪ್ರಭು ಪಾಟೀಲ್

ಕಲಬುರಗಿ, ಜೂನ್, 27: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೈಸೂರು ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರ ಪಾತ್ರ ದೊಡ್ಡದಾಗಿದೆ.ಬೆಂಗಳೂರು ಎಂದ ತಕ್ಷಣ ಕೆಂಪೇಗೌಡರ ಹೆಸರು ನೆನಪಿಗೆ ಬರುತ್ತದೆ ಎಂದು ಸ್ಮರಿಸಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ರಂಗಮಂದಿರದಲ್ಲಿ ಆಯೋಜಿಸಲಾದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಸುಮಾರು ೫೦೦ ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನೀರಿನ ಸೌಕರ್ಯಕ್ಕಾಗಿ ಅನೇಕ ಕೆರೆ-ಕಟ್ಟೆಗಳನ್ನು ನಿರ್ಮಿಸಿ, ಸಮಾಜ ಸೇವೆ ಮತ್ತು ಬಡ ಜನರ ಏಳಿಗೆಗಾಗಿ ಶ್ರಮಿಸಿದರು.
ಶ್ರೀರಂಗಪಟ್ಟಣ ಮತ್ತು ಮೈಸೂರಿನಿಂದ ಹಿಡಿದು ಬೆಂಗಳೂರಿನ ಸುತ್ತಮುತ್ತಲಿನ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಕೆಂಪೇಗೌಡರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ಶಿವಪ್ರಭು ಹಿರೇಮಠ್ ಅವರು ಮಾತನಾಡಿ,
ಬುದ್ಧ, ಬಸವಣ್ಣ, ವಾಲ್ಮೀಕಿ ಮೊದಲಾದ ಯುಗ ಪುರುಷರು ಸಮಾಜಕ್ಕೆ ಹೊಸ ದಾರಿ ತೋರಿಸಿದ್ದಾರೆ. ಯಾವುದೇ ಜಾತಿ ಅಥವಾ ಧರ್ಮದಲ್ಲಿ ಹುಟ್ಟಿದರೂ,ಅವರ ಮಾನವೀಯ ಮೌಲ್ಯಗಳನ್ನು ಜನರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಸಮಾಜ ಮುಖಂಡರಾದ ಅಣ್ಣಾರಾವ್ ದುಗೊಂಡ ಅವರು ಕೆಂಪೇಗೌಡರ ಇತಿಹಾಸ ಹಾಗೂ ಅವರ ವಂಶಸ್ಥರ ಸಾಧನೆಗಳನ್ನು ಅರ್ಥಮಾಡಿಕೊಳ್ಳಲು ಶಾಸನಗಳು ಮತ್ತು ತಾಳೆಗರಿಗಳ ಆಳವಾದ ಅಧ್ಯಯನ ಅಗತ್ಯ ಎಂದರು.
ಕರ್ನಾಟಕ ಮತ್ತು ತಮಿಳುನಾಡಿನ ಇತಿಹಾಸಕಾರರು ಪರಸ್ಪರ ಸಂಶೋಧನೆ ಹಾಗೂ ಸಂವಾದಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಕೆಂಪೇಗೌಡರ ಇತಿಹಾಸದ ಮೇಲಿರುವ ಹಲವು ಪ್ರಶ್ನೆಗಳಿಗೆ ನಿಖರ ಉತ್ತರ ಸಿಗಲು ಸಾಧ್ಯ ಎಂದು ವಿಶೇಷ ಉಪನ್ಯಾಸ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ಜಗದೀಶ್ವರಿ ನಾಶಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ, ಜಿಲ್ಲಾ ಅಧ್ಯಕ್ಷರಾದ ಶಿವಯೋಗಪ್ಪ ಬಿ. ಚಿತ್ತಾಪುರ ಗುಂಡಗುರ್ತಿ,ಶ್ರೀ ಕುಡು ಒಕ್ಕಲಿಗ ಅಭಿವೃದ್ಧಿ ಸೇವಾ ಸಂಘ, ಬೆಂಗಳೂರು ರಾಜ್ಯಾಧ್ಯಕ್ಷರು ಶಿವರಾಜ್ ಪಾಟೀಲ್, ಸಮಾಜದ ಮುಖಂಡರು ಹಾಗೂ ಅನೇಕರು ಭಾಗವಹಿಸಿದ್ದರು



