ಜಿಲ್ಲಾಸುದ್ದಿ

ಪೊಲೀಸ್ ನೇಮಕಾತಿ ಪರೀಕ್ಷೆಗೆ ಜುಲೈ 2ರಂದು ಉಚಿತ ಕಾರ್ಯಾಗಾರ

ಕಲಬುರ್ಗಿ, ಜೂ. 30: ಪೊಲೀಸ್ ಇಲಾಖೆಯ ಸ್ಪರ್ಧಾತ್ಮಕ ನೇಮಕಾತಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಜ್ಯೋತಿ ಕರಿಯರ್ ಅಕಾಡೆಮಿ ವತಿಯಿಂದ ಜುಲೈ 2ರಂದು ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿಯ ನಿರ್ದೇಶಕ ಎಸ್.ಎಸ್. ಹಿರೇಮಠ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ರಾಮ ಮಂದಿರದ ಉಚ್ಚ ನ್ಯಾಯಾಲಯ ರಸ್ತೆಯ ಕಾರ್ತಿಕ ಅಪಾರ್ಟ್‌ಮೆಂಟ್ ಸಮೀಪ ಬೆಳಿಗ್ಗೆ 9 ಗಂಟೆಗೆ ಕಾರ್ಯಾಗಾರ ಆರಂಭವಾಗಲಿದೆ ಎಂದು ಹೇಳಿದರು.

ಪೊಲೀಸ್ ಇಲಾಖೆಯಲ್ಲಿ ಸುಮಾರು 5 ಸಾವಿರ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳಿಗೆ ಪರೀಕ್ಷೆಯ ಸಿದ್ಧತೆ ಕುರಿತು ಮಾರ್ಗದರ್ಶನ ನೀಡಲಾಗುವುದು. ಅನುಭವಿ ಉಪನ್ಯಾಸಕರು ವಿಷಯವಾರು ಉಪನ್ಯಾಸ ನೀಡುವುದರೊಂದಿಗೆ ಮಾದರಿ ಸಾಮಾನ್ಯ ಜ್ಞಾನ (ಜಿಕೆ) ಪರೀಕ್ಷೆಯನ್ನೂ ನಡೆಸಲಿದ್ದಾರೆ ಎಂದು ತಿಳಿಸಿದರು.

ಬಹಳ ದಿನಗಳ ಬಳಿಕ ವಯೋಮಿತಿ ಸಡಿಲಿಕೆ ಮಾಡಿ ನೇಮಕಾತಿಗೆ ಅವಕಾಶ ಕಲ್ಪಿಸಿರುವುದರಿಂದ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಕಾರ್ಯಾಗಾರದ ಬಳಿಕ ಆಗಸ್ಟ್ 1ರವರೆಗೆ ನಿಯಮಿತ ತರಗತಿಗಳು ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ವಿಷಯಗಳ ಪುನರಾವರ್ತನೆ ಹಾಗೂ ಸಮಗ್ರ ಸಿದ್ಧತೆಗೆ ಒತ್ತು ನೀಡಲಾಗುವುದು ಎಂದರು.

ಸ್ಪರ್ಧಾರ್ಥಿಗಳು ಒಂದು ತಿಂಗಳ ಅವಧಿಯನ್ನು ಸಮರ್ಪಕವಾಗಿ ಬಳಸಿಕೊಂಡು ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಬೇಕು ಎಂದು ಕರೆ ನೀಡಿದ ಅವರು, ಹೆಚ್ಚಿನ ಮಾಹಿತಿಗಾಗಿ 94803 97516 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button