ಜಿಲ್ಲಾಸುದ್ದಿ

ಗೊಂಡ ಸಮಾಜದ ವಿದ್ಯಾರ್ಥಿಗಳಿಗೆ ಜುಲೈ 19ಕ್ಕೆ ಪ್ರತಿಭಾ ಪುರಸ್ಕಾರ

ಬೀದರ್, ಜು.4- ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜುಲೈ 19 ರಂದು ಬೆಳಿಗ್ಗೆ 9ಕ್ಕೆ ಗೊಂಡ (ಕುರುಬ) ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 80ಕ್ಕೂ ಅಧಿಕ ಅಂಕ ಗಳಿಸಿದ ಸಮಾಜದ 200 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು. ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಜರುಗಲಿವೆ ಎಂದು ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷಕುಮಾರ್ ಜೋಳದಾಪಕೆ ಅವರು ತಿಳಿಸಿದ್ದಾರೆ.


ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಾಹಿತಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಅರ್ಜಿ ಸಲ್ಲಿಕೆಗೆ ಅವಕಾಶ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಕೆಗೆ ಜುಲೈ 12ರವರೆಗೆ ಅವಕಾಶ ಕಲ್ಪಿಸಲಾಗಿದೆ. ಗೊಂಡ(ಕುರುಬ) ಸಮಾಜದ ಅರ್ಹ ಅಭ್ಯರ್ಥಿಗಳು ದೃಢೀಕೃತ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಹಾಗೂ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ನಗರದ ಬಿ.ವಿ.ಬಿ. ಕಾಲೇಜು ರಸ್ತೆಯಲ್ಲಿ ಇರುವ ಎಕ್ಸಿಸ್ ಬ್ಯಾಂಕ್ ಕೆಳ ಮಹಡಿಯಲ್ಲಿರುವ ಆದರ್ಶ ಐಟಿಐ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.


ಹೆಸರು ನೊಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಕಾಲೇಜಿನ ಕಿರಿಯ ತರಬೇತಿ ಅಧಿಕಾರಿ ವಿಜಯಕುಮಾರ್ ಬ್ಯಾಲಹಳ್ಳಿ (ಮೊ:8970189141) ಅವರನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button