ಕಾಂಗ್ರೆಸ್ ಕಚೇರಿಯಲ್ಲಿ ಇಂದು ಬಾಬು ಜಗಜೀವನರಾಮ್ರ ಪುಣ್ಯ ಸ್ಮರಣೆ

ಕಲಬುರ್ಗಿ, ಜು.೫- ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇದೇ ಜುಲೈ ೬ರಂದು ಬೆಳಿಗ್ಗೆ ಹತ್ತು ಗಂಟೆಗೆ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀನವನರಾಂ ಅವರ ಪುಣ್ಯದಿನವನ್ನು ಆಚರಣೆ ಮಾಡಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಕಾಳಗಿ ಅವರು ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖಂಡರು, ನಿಗಮ/ಮಂಡಳಿ/ಪ್ರಾಧಿಕಾರದ ಅಧ್ಯಕ್ಷರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲೆಯ ಪುರ, ಪಂಚಾಯಿತಿ ಸದಸ್ಯರು, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಮಹಾಪೌರರು, ಉಪ ಮಹಾಪೌರರು ಹಾಗೂ ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅವರು ಹೇಳಿಕೆಯಲ್ಲಿ ಕೋರಿದ್ದಾರೆ.



