ರಾಜ್ಯ

ಜುಲೈ 6ರಿಂದ ಕಲಬುರಗಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಭೇಟಿ

ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಮಾಲೋಚನೆ, ಪ್ರಾದೇಶಿಕ ವಿಭಾಗಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ

ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಜುಲೈ 6ರಂದು ಸಂಜೆ ವಿಶೇಷ ವಿಮಾನದ ಮೂಲಕ ಬೀದರ್‌ನಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಅಂದು ಸಂಜೆ 6 ಗಂಟೆಗೆ ಕಲಬುರಗಿಗೆ ಆಗಮಿಸಿದ ಬಳಿಕ ಇಬ್ಬರೂ ನಾಯಕರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಕಲಬುರಗಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಜುಲೈ 7ರಂದು ಬೆಳಿಗ್ಗೆ 9.30 ಗಂಟೆಗೆ ಕಲಬುರಗಿಯಲ್ಲಿ ನಡೆಯಲಿರುವ ಪ್ರಾದೇಶಿಕ ವಿಭಾಗಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಭೆಯ ಬಳಿಕ ಮಧ್ಯಾಹ್ನ 2.20 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button