ಧಾರ್ಮಿಕ

ಜುಲೈ 7ರಂದು ಮಂಗಲಗಿಯಲ್ಲಿ ಅಶ್ವಾರೂಢ ಬಸವೇಶ್ವರ ಮೂರ್ತಿ ಲೋಕಾರ್ಪಣೆ

ಸಾನ್ನಿಧ್ಯ ವಹಿಸಲಿರುವ ವಿವಿಧ ಮಠಾಧೀಶರು; ಜನಪ್ರತಿನಿಧಿಗಳು, ಗಣ್ಯರ ಸಮ್ಮುಖದಲ್ಲಿ ಸಮಾರಂಭ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಮಂಗಲಗಿ ಗ್ರಾಮದಲ್ಲಿ ಜುಲೈ 7ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವೇಶ್ವರರ ಅಶ್ವಾರೂಢ ಮೂರ್ತಿ ಲೋಕಾರ್ಪಣೆ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ನಿಂಬೆಣ್ಣಪ್ಪ ಕೋರವಾರ ಹಾಗೂ ಕಾರ್ಯಾಧ್ಯಕ್ಷ ಸಂತೋಷ ಆರ್. ಪಾಟೀಲ ತಿಳಿಸಿದ್ದಾರೆ.

ಭರತನೂರಿನ ಚಿಕ್ಕ ಗುರುನಂಜೇಶ್ವರ ಮಹಾಸ್ವಾಮಿಗಳು ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಆಳಂದ ತೋಂಟದಾರ್ಯ ಮಠದ ವಿಶ್ವನಾಥ ಕೋರಣೇಶ್ವರ ಸ್ವಾಮೀಜಿ ಹಾಗೂ ಬಸವಕಲ್ಯಾಣದ ಗುಣತೀರ್ಥ ಮಠದ ಬಸವಪ್ರಭು ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಶಾಂತಸೋಮನಾಥ ಶಿವಾಚಾರ್ಯರು ಧ್ವಜಾರೋಹಣ ನೆರವೇರಿಸಲಿದ್ದು, ಕೊತ್ತಲ ಬಸವೇಶ್ವರ ದೇವಾಲಯದ ಡಾ. ಸದಾಶಿವ ಮಹಾಸ್ವಾಮಿಗಳು ಜ್ಯೋತಿ ಬೆಳಗಿಸಲಿದ್ದಾರೆ.

ಶಾಸಕ ಡಾ. ಅವಿನಾಶ ಜಾಧವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಜಗದೇವ ಟಿ. ಗುತ್ತೇದಾರ, ಲೋಕಸಭಾ ಸದಸ್ಯ ಉಮೇಶ ಜಿ. ಜಾಧವ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಭೀಮರಾವ ಟಿ.ಟಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ ಅನುಭಾವ ನೀಡಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಸಂತೋಷ ಆರ್. ಪಾಟೀಲ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾಧ್ಯಕ್ಷ ಆರ್.ಜಿ. ಶೆಟಗಾರ, ರಾಜ್ಯ ಸಂಚಾಲಕ ರವೀಂದ್ರ ಶಾಬಾದಿ, ರೇವಣಸಿದ್ದಯ್ಯ ಮಠ, ರಾಜಶೇಖರ ಯಂಕಂಚಿ, ಸಂಗಣ್ಣ ಧೂಳಾಗುಂಡಿ, ಅಶೋಕ ಘೂಳಿ, ಜಗದೀಶ ಜಿ. ಪಾಟೀಲ, ರಾಮಲಿಂಗಾರೆಡ್ಡಿ, ರಾಜು ನೀಲಂಗೆ, ಶರಣಗೌಡ ಪೊಲೀಸ್ ಪಾಟೀಲ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button