ರಾಜಕೀಯ

ಜೇವರ್ಗಿ ಕ್ಷೇತ್ರದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಬಿಜೆಪಿ ಸಂಘಟನಾ ಸಭೆ

ನೆಲೋಗಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯಕರ್ತರಿಗೆ ಶೋಭಾ ಬಾಣಿ ಮಾರ್ಗದರ್ಶನ

ಕಲಬುರಗಿ ಜಿಲ್ಲೆಯ ಜೇವರ್ಗಿ ವಿಧಾನಸಭಾ ಕ್ಷೇತ್ರದ ನೆಲೋಗಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದ ಅಂಗವಾಗಿ ಭಾರತೀಯ ಜನತಾ ಪಕ್ಷದ ಸಂಘಟನಾ ಸಭೆ ನಡೆಯಿತು.

ಸಭೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಬೂತ್ ಮಟ್ಟದ ಪ್ರತಿನಿಧಿಗಳು, ಪದಾಧಿಕಾರಿಗಳು ಹಾಗೂ ಯುವಕರು ಭಾಗವಹಿಸಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಕುರಿತು ಚರ್ಚಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ಮುಖಂಡೆ ಶ್ರೀಮತಿ ಶೋಭಾ ಬಾಣಿ ಅವರು, ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಕಾರ್ಯಕರ್ತರು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನದ ಮಹತ್ವವನ್ನು ವಿವರಿಸಿದ ಅವರು, ಬೂತ್ ಮಟ್ಟದಲ್ಲಿ ಸಂಘಟಿತವಾಗಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರು, ಗ್ರಾಮಸ್ಥರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಯುವಕರು ಉಪಸ್ಥಿತರಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಸಂಕಲ್ಪ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button