ಕಲೆ

ಜುಲೈ 11ರಂದು ಕಲಬುರಗಿಯಲ್ಲಿ ‘ಸ್ವಾತಂತ್ರ್ಯದ ಓಟ’ ನಾಟಕ ಪ್ರದರ್ಶನ

ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಉಚಿತ ಪ್ರವೇಶ; ರಂಗಾಸಕ್ತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಹ್ವಾನ

ಕಲಬುರಗಿ, ಜು. 10: ಕಲಬುರಗಿ ರಂಗಾಯಣದ ಸಂಯುಕ್ತಾಶ್ರಯದಲ್ಲಿ ‘ಸ್ವಾತಂತ್ರ್ಯದ ಓಟ’ ನಾಟಕ ಪ್ರದರ್ಶನವು ಜುಲೈ 11ರಂದು ಸಂಜೆ 6 ಗಂಟೆಗೆ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ನಡೆಯಲಿದೆ ಎಂದು ಕಲಬುರಗಿ ರಂಗಾಯಣದ ನಿರ್ದೇಶಕಿ ಡಾ. ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ.

ಈ ನಾಟಕವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಬೊಳುವಾರ ಮಹಮ್ಮದ್ ಕುಂಞ ಅವರ ಕಾದಂಬರಿಯನ್ನು ಆಧರಿಸಿ ರಂಗರೂಪ ಪಡೆದಿದ್ದು, ನಟರಾಜ್ ಹೊನ್ನವಳ್ಳಿ ಅವರ ನಿರ್ದೇಶನ ಹಾಗೂ ರಾಘವ ಕಮ್ಮಾರ ಅವರ ಸಂಗೀತದಲ್ಲಿ ಶಿವಮೊಗ್ಗ ರಂಗಾಯಣದಿಂದ ಪ್ರಸ್ತುತಪಡಿಸಲಾಗುತ್ತಿದೆ.

ನಾಟಕ ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ರಂಗಭೂಮಿ ಪ್ರೇಮಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಾಟಕ ವೀಕ್ಷಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಡಾ. ಸುಜಾತಾ ಜಂಗಮಶೆಟ್ಟಿ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button