ಬೈಕ್ ಅಪಘಾತದಲ್ಲಿ ಮೂವರು ದುರ್ಮರಣ: ಪಣೆಗಾಂವ್ ಗ್ರಾಮದಲ್ಲಿ ಶೋಕದ ಛಾಯೆ
ಅರ್ಧರಾತ್ರಿ ನಿಯಂತ್ರಣ ತಪ್ಪಿದ ಬೈಕ್ ಕಲ್ಲಿಗೆ ಡಿಕ್ಕಿ; ಮೂವರು ಸ್ಥಳದಲ್ಲೇ ಮೃತಪಟ್ಟ ದುರಂತ

ಕಲಬುರಗಿ: ಜಿಲ್ಲೆಯ ಪಣೆಗಾಂವ್ ಗ್ರಾಮ ಸಮೀಪ ಭಾನುವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮಧ್ಯರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಪಣೆಗಾಂವ್ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಧರ್ಮು ರಾಜು ಚವಾಣ (31), ಅನಿಲ್ ಗೋಪಾಲ ಪವಾರ್ (34) ಹಾಗೂ ಸುಂದರ ಹರಿಶ್ಚಂದ್ರ ರಾಠೋಡ್ (32) ಎಂದು ಗುರುತಿಸಲಾಗಿದೆ. ಮೂವರೂ ಪಣೆಗಾಂವ್ ಗ್ರಾಮದ ನಿವಾಸಿಗಳಾಗಿದ್ದಾರೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದು, ಮೂವರ ಸಾವಿನಿಂದ ಪಣೆಗಾಂವ್ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.



