ಶಿಕ್ಷಣ

ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಎಸ್‌ಬಿ ವಾಣಿಜ್ಯ ಮಹಾವಿದ್ಯಾಲಯ ವಿದ್ಯಾರ್ಥಿಗೆ ಯಶಸ್ಸು

ಜೂನ್‌ನಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ; ವಿದ್ಯಾರ್ಥಿಯ ಸಾಧನೆಗೆ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳ ಅಭಿನಂದನೆ

ಕಲಬುರಗಿ, ಜು.13: ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಸೈಯದ್ ಸುಲೈಮಾನ್ ಎಂ. ಅವರು ಜೂನ್ ತಿಂಗಳಲ್ಲಿ ನಡೆದ ಸಿಎ (ಚಾರ್ಟರ್ಡ್ ಅಕೌಂಟೆನ್ಸಿ) ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಡಾ. ದಾಕ್ಷಾಯಿಣಿ ಎಸ್. ಅಪ್ಪ, 9ನೇ ಪೀಠಾಧಿಪತಿ ದೊಡ್ಡಪ್ಪ ಎಸ್. ಅಪ್ಪ ಹಾಗೂ ಸಂಸ್ಥೆಯ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಅಭಿನಂದನೆ ಸಲ್ಲಿಸಿ, ಮುಂದಿನ ವಿದ್ಯಾಭ್ಯಾಸ ಮತ್ತು ವೃತ್ತಿಜೀವನದಲ್ಲಿ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ದಶರಥ ಮೇತ್ರೆ, ನ್ಯಾಕ್ ಸಂಯೋಜಕಿ ಡಾ. ಸುನಂದಾ ವಾಂಜರಖೇಡೆ, ಪ್ರೊ. ದಯಾನಂದ ಹೊಡಲ್, ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸೈಯದ್ ಸುಲೈಮಾನ್ ಅವರ ಸಾಧನೆಗೆ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದರು.

Related Articles

Leave a Reply

Your email address will not be published. Required fields are marked *

Back to top button