ಶಿಕ್ಷಣ

ಕುರುಬ ಸಮಾಜ ಹಾಗೂ ಹಿಂದುಳಿದ ವರ್ಗದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆ ಉಚಿತ ತರಬೇತಿ ಶಿಬಿರ

ಆಗಸ್ಟ್ 1ರಿಂದ ತರಬೇತಿ ಆರಂಭ; ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನ

ಕುರುಬ ಸಮಾಜದ ಯುವಕ-ಯುವತಿಯರು ಹಾಗೂ ರಾಜ್ಯದ ಹಿಂದುಳಿದ ವರ್ಗಗಳ ಯುವಜನರಿಗೆ ಸರ್ಕಾರಿ ಸೇವೆಗೆ ಅಗತ್ಯವಾದ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಸಿದ್ಧತೆ ಕಲ್ಪಿಸುವ ಉದ್ದೇಶದಿಂದ ಕನಕಶ್ರೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ತರಬೇತಿ ಶಿಬಿರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಟ್ರಸ್ಟ್‌ನ ಟ್ರಸ್ಟಿ ಎಂ. ಮಹಾದೇವ ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜಸೇವೆಯ ದೃಷ್ಟಿಯಿಂದ ಯಾವುದೇ ಲಾಭಾಪೇಕ್ಷೆಯಿಲ್ಲದೆ ಗುಣಮಟ್ಟದ ತರಬೇತಿಯನ್ನು ಕಡಿಮೆ ವೆಚ್ಚದಲ್ಲಿ ನೀಡುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ. ಆಗಸ್ಟ್ 1ರಿಂದ 31ರವರೆಗೆ ನಡೆಯುವ ತರಬೇತಿಗಾಗಿ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಕರ್ನಾಟಕದಲ್ಲಿ ಐಎಎಸ್, ಐಪಿಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಹೆಸರಾಂತ ಇನ್‌ಸೈಟ್ಸ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ವಿನಯಕುಮಾರ್ ಜಿ.ಬಿ. ಅವರ ಮಾರ್ಗದರ್ಶನದಲ್ಲಿ ತರಬೇತಿ ನಡೆಯಲಿದೆ. ಪರೀಕ್ಷಾ ಮಾದರಿಗೆ ಅನುಗುಣವಾಗಿ ಅನುಭವಿ ಬೋಧಕರಿಂದ ಸಮಗ್ರ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಗ್ರೂಪ್ ‘ಸಿ’ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸುಮಾರು ಮೂರು ತಿಂಗಳ ಅವಧಿಯ ತರಬೇತಿ ಶಿಬಿರವನ್ನು ಕನಕಶ್ರೀ ಸಂಕೀರ್ಣದಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳಿಗೆ ತರಬೇತಿ, ವಸತಿ ಹಾಗೂ ಸ್ಟಡಿ ಸೆಂಟರ್ ಸೌಲಭ್ಯ ಕಲ್ಪಿಸಲಾಗಿದ್ದು, ಊಟೋಪಹಾರದ ವೆಚ್ಚಕ್ಕಾಗಿ ಮಾತ್ರ ಮಾಸಿಕ ₹6,000 ಶುಲ್ಕ ನಿಗದಿಪಡಿಸಲಾಗಿದೆ. ಶಿಬಿರವನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಹೇಳಿದರು.

ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ಪಿ.ಎನ್. ಕೃಷ್ಣಮೂರ್ತಿ (ಮೊ. 9483425046), ಎಂ. ಮಹಾದೇವ (9448514217), ರಂಗಧಾಮಯ್ಯ ಪಿ. (9980804115) ಹಾಗೂ ಟ್ರಸ್ಟಿ ಸಿ. ಬಸವರಾಜು (9448013559) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‌ನ ಖಜಾಂಚಿ ಎಂ. ಪ್ರಕಾಶ್ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button