ಸಮಾಜ

ಸಮಾಜಮುಖಿ ಸೇವೆಗಳ ಮೂಲಕ ಅರುಣಕುಮಾರ್ ಪಾಟೀಲ್ ಜನ್ಮದಿನ ಆಚರಣೆ ನಾಳೆ

ವಿಶೇಷ ಪೂಜೆ, ರೋಗಿಗಳಿಗೆ ಹಣ್ಣು ವಿತರಣೆ, ವೃದ್ಧಾಶ್ರಮ ಹಾಗೂ ವಿದ್ಯಾರ್ಥಿಗಳಿಗೆ ನೆರವು ಸೇರಿದಂತೆ ವಿವಿಧ ಸೇವಾ ಕಾರ್ಯಕ್ರಮಗಳು

ಜೈ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕರು ಹಾಗೂ ಕಲಬುರಗಿ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ್ ಎಸ್. ಪಾಟೀಲ್ ಕೊಡಲಹಂಗರಗಾ ಅವರ ಜನ್ಮದಿನವನ್ನು ಜುಲೈ 19ರಂದು ಸಮಾಜಮುಖಿ ಸೇವಾ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಅಭಿಮಾನಿ ಬಳಗದ ಅಧ್ಯಕ್ಷ ಅಮರನಾಥ ಸಾಹು ಕುಳಗೇರಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ್ಮದಿನದ ಅಂಗವಾಗಿ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುವುದು. ನಂತರ ನಿರ್ಗತಿಕರು ಹಾಗೂ ಮಾನಸಿಕ ಅಸ್ವಸ್ಥರಿಗೆ ಕಂಬಳಿ ಮತ್ತು ಉಪಹಾರ ವಿತರಣೆ, ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಾಗೂ ಹಂಪಲುಗಳ ವಿತರಣೆ, ತಾಜ್‌ಸುಲ್ತಾನಪುರದ ಮಹಾದೇವಿ ವೃದ್ಧಾಶ್ರಮದ ನಿವಾಸಿಗಳಿಗೆ ಕಂಬಳಿ ಹಾಗೂ ಉಪಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇದರ ಜೊತೆಗೆ ಸಿದ್ಧಾರ್ಥ ಮೂಕ ಮತ್ತು ಕಿವುಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳು ಹಾಗೂ ಹಣ್ಣು-ಹಂಪಲುಗಳನ್ನು ವಿತರಿಸಲಾಗುವುದು. ನಂತರ ಕೇಕ್ ಕತ್ತರಿಸುವ ಕಾರ್ಯಕ್ರಮವೂ ನಡೆಯಲಿದೆ ಎಂದು ತಿಳಿಸಿದರು.

ಈ ಸಮಾಜಮುಖಿ ಸೇವಾ ಕಾರ್ಯಕ್ರಮಗಳಲ್ಲಿ ಹಿರಿಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಗಣ್ಯರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಲ್ಯಾಣಪ್ಪ ಪಾಟೀಲ್ ಮಳಖೇಡ್, ವಿವೇಕ್ ಬಿರಾದಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button