ಜಿಲ್ಲಾಸುದ್ದಿ

ಕಲಬುರಗಿಯಲ್ಲಿ ಶೇ.99.88ರಷ್ಟು ಗಣತಿ ನಮೂನೆ ವಿತರಣೆ ಪೂರ್ಣ

23.68 ಲಕ್ಷ ಮತದಾರರಿಗೆ ನಮೂನೆ ವಿತರಣೆ; 12.59 ಲಕ್ಷಕ್ಕೂ ಅಧಿಕ ಅರ್ಜಿಗಳ ಡಿಜಿಟೈಸೇಶನ್

ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಜಿಲ್ಲೆಯಾದ್ಯಂತ ಭರದಿಂದ ಸಾಗುತ್ತಿದ್ದು, ಶನಿವಾರದ ಅಂತ್ಯದ ವೇಳೆಗೆ ಜಿಲ್ಲೆಯ ಒಟ್ಟು 23,71,542 ಮತದಾರರ ಪೈಕಿ 23,68,788 ಮಂದಿಗೆ ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.

ಇಲ್ಲಿಯವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ.) 12,59,137 ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಸಂಗ್ರಹಿಸಿ ಮೊಬೈಲ್ ತಂತ್ರಾಂಶದ ಮೂಲಕ ಡಿಜಿಟೈಸ್ ಮಾಡಿದ್ದಾರೆ. ಮನೆ-ಮನೆ ಭೇಟಿ ವೇಳೆ 628 ಮತದಾರರು ಗೈರಾಗಿರುವುದು, 19,416 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು ಹಾಗೂ 18,009 ಮತದಾರರು ನಿಧನ ಹೊಂದಿರುವುದು ವರದಿಯಾಗಿದೆ.

ಕಲಬುರಗಿ ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಜಿಲ್ಲೆಯ ಉಳಿದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.100ರಷ್ಟು ಗಣತಿ ನಮೂನೆಗಳ ವಿತರಣೆ ಪೂರ್ಣಗೊಂಡಿದೆ. ಉಳಿದ ಕ್ಷೇತ್ರಗಳಲ್ಲಿಯೂ ವಿತರಣೆ ಕಾರ್ಯ ಅಂತಿಮ ಹಂತದಲ್ಲಿದ್ದು, ಈಗ ಡಿಜಿಟೈಸೇಶನ್ ಕಾರ್ಯಕ್ಕೆ ಹೆಚ್ಚಿನ ವೇಗ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button