ಅಪಘಾತ

ಮಹಾಗಾಂವ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಐವರು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಬಸ್; ಚಾಲಕ, ನಿರ್ವಾಹಕರಿಗೂ ಗಾಯ, ಎಲ್ಲರೂ ಪ್ರಾಣಾಪಾಯದಿಂದ ಪಾರು

ಕಮಲಾಪುರ, ಜು.31: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ತಾಲ್ಲೂಕಿನ ಮಹಾಗಾಂವ್ ಸಮೀಪ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಬೀದರ್‌ನಿಂದ ಕಲಬುರಗಿಯತ್ತ ಬರುತ್ತಿದ್ದ ಬಸ್‌ನಲ್ಲಿ ಕೇವಲ ಐವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕರಿಗೂ ಗಾಯಗಳಾಗಿವೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಗುಂಡಿಗೆ ಉರುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತ ಸಂಭವಿಸಿದ ತಕ್ಷಣ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಬಸ್‌ನಿಂದ ಹೊರಬಂದರು. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ಘಟನೆ ಕುರಿತು ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಅಪಘಾತದ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button