ಸಾಂಸ್ಕೃತಿಕಸಿನಿಮಾ

ಚಲನಚಿತ್ರ ನಾಯಕಿ ನೇಹಾ ಮುಲಗೆಗೆ ಸನ್ಮಾನ

ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡ ಬೀದರ್‌ನ ಪ್ರತಿಭೆಗೆ ಗೌರವ

ಬೀದರ್, ನ. 4: ಕನ್ನಡ ಚಲನಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿರುವ ಬೀದರ್ ನಗರದ ಬಸವರಾಜ ಮುಲಗೆ ಅವರ ಪುತ್ರಿ ನೇಹಾ ಮುಲಗೆ ಅವರನ್ನು ಕರ್ನಾಟಕ ಸಾಹಿತ್ಯ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಬೀದರ್‌ನ ಪ್ರತಿಭೆಯೊಬ್ಬರು ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ ಗುರುತಿಸಿಕೊಂಡಿರುವುದು ಜಿಲ್ಲೆಯ ಕಲಾಭಿಮಾನಿಗಳಿಗೆ ಸಂತಸದ ಸಂಗತಿಯಾಗಿದೆ. ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ನೇಹಾ ಅವರನ್ನು ಸನ್ಮಾನಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಪ್ರೊ. ಜಗನ್ನಾಥ ಹೆಬ್ಬಾಳೆ, ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಡಾ. ರಾಜಕುಮಾರ ಹೆಬ್ಬಾಳೆ, ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ಡಾ. ಸಾವಿತ್ರಿ ಹೆಬ್ಬಾಳೆ, ಡಾ. ಸುನೀತಾ ಕೂಡ್ಲಿಕರ್, ನಾಗಶೆಟ್ಟಿ ಜೋತೆಪ್ಪನೂರ, ವೈಜನಾಥ ಪಾಟೀಲ ಹಾಗೂ ಮಹಾನಂದಾ ಹೆಬ್ಬಾಳೆ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button