ಶಿಕ್ಷಣಸಮಾಜ

ಜಂಗಮ ಸಮಾಜದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ 85%ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಂದ ಜುಲೈ 29ರೊಳಗೆ ನೋಂದಣಿಗೆ ಆಹ್ವಾನ.

ಜಂಗಮ ಸಮಾಜ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಗಸ್ಟ್ 2ರಂದು ನಗರದ ಪತ್ರಿಕಾ ಭವನದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಂಗಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕುರಿತು ಸಂಘದ ಜಿಲ್ಲಾಧ್ಯಕ್ಷ ಸತೀಶ್ ಸಿ. ಡಿಗ್ಗಾಂವಕರ್ (ಪಿಂಟು) ಸ್ವಾಮಿ ಮಾಹಿತಿ ನೀಡಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರನ್ನೂ ಸನ್ಮಾನಿಸಲಾಗುತ್ತದೆ ಎಂದರು.

ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿರುವ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಜುಲೈ 29ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಘದ ಅಧ್ಯಕ್ಷರನ್ನು 98868 84143 ಹಾಗೂ ಕಾರ್ಯದರ್ಶಿ ರುದ್ರಮುನಿ ಎಂ. ಮಠಪತಿ ಅವರನ್ನು 97394 58555 ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button