ಅಪರಾಧ

ಸಿಇಐಆರ್ ನೆರವಿನಿಂದ ಕಳೆದುಹೋದ 7 ಮೊಬೈಲ್‌ಗಳ ಪತ್ತೆ; ವಾರಸುದಾರರಿಗೆ ಹಸ್ತಾಂತರ

ರೇವೂರು ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ; ಕಳೆದುಹೋದ ಮೊಬೈಲ್ ಪತ್ತೆಗೆ ಸಿಇಐಆರ್ ಪೋರ್ಟಲ್ ಬಳಕೆಗೆ ಸಲಹೆ

ಅಫಜಲಪುರ, ಜು.24: ಸಾರ್ವಜನಿಕರು ಕಳೆದುಕೊಂಡಿದ್ದ ಏಳು ಮೊಬೈಲ್ ಫೋನ್‌ಗಳನ್ನು ಸಿಇಐಆರ್ (Central Equipment Identity Register–CEIR) ಪೋರ್ಟಲ್ ಸಹಾಯದಿಂದ ಪತ್ತೆಹಚ್ಚಿದ ರೇವೂರು ಪೊಲೀಸ್ ಠಾಣೆ ಪೊಲೀಸರು, ಅವುಗಳನ್ನು ನೈಜ ವಾರಸುದಾರರಿಗೆ ಹಸ್ತಾಂತರಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರೇವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದುಹೋದ ಮೊಬೈಲ್‌ಗಳ ಕುರಿತು ದಾಖಲಾಗಿದ್ದ ದೂರುಗಳ ಆಧಾರದ ಮೇಲೆ ಪೊಲೀಸರು ಸಿಇಐಆರ್ ಪೋರ್ಟಲ್ ಮೂಲಕ ತಾಂತ್ರಿಕ ಪರಿಶೀಲನೆ ನಡೆಸಿದರು. ಬಳಿಕ ವಿವಿಧ ಸ್ಥಳಗಳಲ್ಲಿ ಪತ್ತೆಯಾದ ಏಳು ಮೊಬೈಲ್‌ಗಳನ್ನು ವಶಪಡಿಸಿಕೊಂಡು, ಅಗತ್ಯ ದಾಖಲೆಗಳ ಪರಿಶೀಲನೆಯ ನಂತರ ನೈಜ ಮಾಲೀಕರಿಗೆ ಹಸ್ತಾಂತರಿಸಿದರು.

ತಮ್ಮ ಕಳೆದುಹೋದ ಮೊಬೈಲ್‌ಗಳನ್ನು ಮರಳಿ ಪಡೆದ ಸಾರ್ವಜನಿಕರು ರೇವೂರು ಪೊಲೀಸರ ಕಾರ್ಯವನ್ನು ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದರು. ತಂತ್ರಜ್ಞಾನದ ಸಮರ್ಪಕ ಬಳಕೆಯ ಮೂಲಕ ಸಾರ್ವಜನಿಕರ ಆಸ್ತಿಯನ್ನು ಮರಳಿ ಒದಗಿಸಿರುವುದು ಶ್ಲಾಘನೀಯ ಕಾರ್ಯ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಪೊಲೀಸರು ಸಾರ್ವಜನಿಕರಿಗೆ ಮಹತ್ವದ ಸಲಹೆಯನ್ನೂ ನೀಡಿದರು. ಮೊಬೈಲ್ ಕಳೆದುಹೋದ ತಕ್ಷಣವೇ ಸಿಇಐಆರ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದರೆ ಮೊಬೈಲ್ ಪತ್ತೆಯಾಗುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ತಿಳಿಸಿದರು. ಮೊಬೈಲ್ ಕಳೆದುಕೊಂಡವರು ತಮ್ಮ ಐಎಂಇಐ (IMEI) ಸಂಖ್ಯೆಯೊಂದಿಗೆ ಸಿಇಐಆರ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿ, ಅಗತ್ಯವಿದ್ದಲ್ಲಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಿದರು.

Related Articles

Leave a Reply

Your email address will not be published. Required fields are marked *

Back to top button