ಜಿಲ್ಲಾಸುದ್ದಿ

ಅತನೂರು, ಇಂಗಳಗಿ(ಬಿ) ಕಾಲುವೆಗಳಿಗೆ ನೀರು ಹರಿಸಲು ರೈತರ ಆಗ್ರಹ

ಮಳೆಯ ಕೊರತೆಯಿಂದ ಬೆಳೆಗಳು ಒಣಗುವ ಆತಂಕ; ರೈತರು ಹಾಗೂ ಅಧಿಕಾರಿಗಳ ತುರ್ತು ಸಭೆ ನಡೆಸುವಂತೆ ಒತ್ತಾಯ

ಅಫಜಲಪುರ, ಆ.6: ತಾಲೂಕಿನ ಅತನೂರು ಹಾಗೂ ಇಂಗಳಗಿ (ಬಿ) ವ್ಯಾಪ್ತಿಯ ಕಾಲುವೆಗಳಿಗೆ ತಕ್ಷಣ ನೀರು ಹರಿಸಬೇಕು ಹಾಗೂ ರೈತರು, ರೈತ ಮುಖಂಡರು ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಎಲ್‌ನಿನೋ ಪರಿಣಾಮದಿಂದ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಫಜಲಪುರ ತಾಲೂಕಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮರ್ಪಕ ಮಳೆಯ ಕೊರತೆಯಿಂದ ಕೃಷಿ ಬೆಳೆಗಳು ಒಣಗುತ್ತಿದ್ದು, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಸಹ ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಬಹುತೇಕ ಕೃಷಿ ಚಟುವಟಿಕೆಗಳು ಮಳೆಯನ್ನೇ ಅವಲಂಬಿಸಿವೆ. ನೀರಿನ ಕೊರತೆಯಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣ ಕ್ರಮ ಕೈಗೊಂಡು ಅತನೂರು ಹಾಗೂ ಇಂಗಳಗಿ (ಬಿ) ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಸಂಬಂಧಿತ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಬೇಕು. ಜೊತೆಗೆ ರೈತರು, ರೈತ ಮುಖಂಡರು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ತುರ್ತು ಸಭೆ ನಡೆಸಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ರೈತರು ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button