ಜಿಲ್ಲಾಸುದ್ದಿ

ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘಕ್ಕೆ ₹26 ಲಕ್ಷ ನಿವ್ವಳ ಲಾಭ

ಮಹಿಳಾ ಸಬಲೀಕರಣವೇ ಸಂಘದ ಧ್ಯೇಯ; ಸ್ವಂತ ಕಟ್ಟಡ ನಿರ್ಮಾಣಕ್ಕೆ ಯೋಜನೆ ಎಂದು ಡಾ. ಸಾವಿತ್ರಿಬಾಯಿ ಹೆಬ್ಬಾಳೆ

ಬೀದರ್, ಜು.27: ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಸಬಲೀಕರಣವನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹26 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷೆ ಡಾ. ಸಾವಿತ್ರಿಬಾಯಿ ಹೆಬ್ಬಾಳೆ ತಿಳಿಸಿದ್ದಾರೆ.

ನಗರದ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನದಲ್ಲಿ ನಡೆದ ಸಂಘದ 28ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರಿಗೆ ಆರ್ಥಿಕವಾಗಿ ಬೆಂಬಲ ನೀಡಿ ಸ್ವಾವಲಂಬಿಗಳನ್ನಾಗಿಸುವುದೇ ಸಂಘದ ಪ್ರಮುಖ ಧ್ಯೇಯವಾಗಿದೆ ಎಂದು ಹೇಳಿದರು.

ಪ್ರಸ್ತುತ ಸಂಘವು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸ್ವಂತ ನಿವೇಶನ ಪಡೆದು ಸ್ವಂತ ಕಟ್ಟಡ ನಿರ್ಮಿಸುವ ಗುರಿ ಹೊಂದಲಾಗಿದೆ. ಸ್ವಸಹಾಯ ಮಹಿಳಾ ಸಂಘಗಳಿಗೆ ಸಾಲ ಸೌಲಭ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಒದಗಿಸಿ ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಂಘದಲ್ಲಿ ಆಕರ್ಷಕ ಬಡ್ಡಿದರದಲ್ಲಿ ವಿವಿಧ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಮಹಿಳೆಯರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಸಂಘದ ಬೆಳವಣಿಗೆಗೆ ಸಹಕರಿಸಿದ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಹಾಗೂ ಸದಸ್ಯೆಯರಿಗೆ ಕೃತಜ್ಞತೆ ಸಲ್ಲಿಸಿದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷೆ ಮೀನಾಕ್ಷಿ ತಗಾರೆ, ನಿರ್ದೇಶಕರಾದ ಶಾಂತಾಬಾಯಿ ಗುಂಡಗಿ, ಶಾಂತಾಬಾಯಿ ಗುನ್ನಳ್ಳಿ, ಡಾ. ಜಗದೇವಿ ಸೂರೆ, ಇಂದುಮತಿ ಮಾಳಗೆ, ಸರಸ್ವತಿ ನಾನಾಪೂರೆ, ರೇಖಾ ಹಾದಿಮನಿ, ಶಾಮಲಾ ಎಲ್., ಅಂಬಿಕಾ ಬಿರಾದಾರ, ಪಂಕಜಾ ಎಸ್. ಹುಗ್ಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಡಾ. ಸುನೀತಾ ಕೂಡ್ಲೀಕರ್ ಕಾರ್ಯಕ್ರಮ ನಿರೂಪಿಸಿದರು. ಸುನೀತಾ ಬುಡೇರಿ ಸ್ವಾಗತಿಸಿದರು. ಪುಷ್ಪಾವತಿ ಫುಲೆಕರ್ ವಂದಿಸಿದರು. ಸಿಬ್ಬಂದಿಗಳಾದ ಅಂಬಿಕಾ ನಿನ್ನೆ, ಶಿವಕುಮಾರ್ ಪರೀಟ್, ಪರಮೇಶ ಪಾಟೀಲ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button