ಜಿಲ್ಲಾಸುದ್ದಿ

ಜೇವರ್ಗಿಯಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ಜಾಥಾಕ್ಕೆ ಚಾಲನೆ

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜನಜಾಗೃತಿ ಮೂಡಿಸಲು ಕರೆ

ಕಲಬುರಗಿ, ಜು. 8: ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಅಂಗವಾಗಿ ಜೇವರ್ಗಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಜೇವರ್ಗಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು, ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ತಯ್ಯಬಾ ಸುಲ್ತಾನಾ ಅವರು ಬುಧವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸುವ ಅಗತ್ಯವಿದ್ದು, ಮಕ್ಕಳಿಗೆ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ಒದಗಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸರ್ಕಾರಿ ಅಭಿಯೋಜಕರು, ಹಿರಿಯ ಕಾರ್ಮಿಕ ನಿರೀಕ್ಷಕ ಕೆ.ಎಸ್. ಪ್ರಸನ್ನ, ಸಂಸ್ಕಾರ ಪ್ರತಿಷ್ಠಾನದ ನಿರ್ದೇಶಕ ವಿಠ್ಠಲ ಚಿಕಣಿ, ಮಾರ್ಗದರ್ಶಿ ಸಂಸ್ಥೆ ಹಾಗೂ ಮಕ್ಕಳ ಸಹಾಯವಾಣಿ ಸಂಸ್ಥೆಯ ಪ್ರತಿನಿಧಿಗಳು, ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕ ಸಂತೋಷ ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button