ಅಪರಾಧಜಿಲ್ಲಾಸುದ್ದಿ

ಮದ್ಯದ ಅಮಲಿನಲ್ಲಿ ಬ್ರಿಮ್ಸ್ ಐಸಿಯುವಿಗೆ ಬೈಕ್ ನುಗ್ಗಿಸಿದ ಯುವಕರು

ರೋಗಿಗಳಿಗೆ ಆತಂಕ ಉಂಟು ಮಾಡಿದ ಘಟನೆ; ಸ್ಥಳಕ್ಕಾಗಮಿಸಿದ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ಕ್ರಮ

ಬೀದರ್, ಜು.27: ಮದ್ಯದ ಅಮಲಿನಲ್ಲಿದ್ದ ಇಬ್ಬರು ಯುವಕರು ಬೈಕ್ ಅನ್ನು ನೇರವಾಗಿ ಬ್ರಿಮ್ಸ್ (BRIMS) ಆಸ್ಪತ್ರೆಯ ಐಸಿಯು (ICU) ವಿಭಾಗದೊಳಗೆ ನುಗ್ಗಿಸಿದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಬೀದರ್ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಬೈಕ್‌ನಲ್ಲಿ ಬಂದಿದ್ದ ಇಬ್ಬರಲ್ಲಿ ಒಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದರು ಎನ್ನಲಾಗಿದೆ. ಆದರೆ ಇಬ್ಬರೂ ಮದ್ಯದ ಅಮಲಿನಲ್ಲಿದ್ದ ಕಾರಣ ಆಸ್ಪತ್ರೆಯ ನಿಯಮಗಳನ್ನು ಉಲ್ಲಂಘಿಸಿ ಬೈಕ್‌ನಲ್ಲೇ ನೇರವಾಗಿ ಐಸಿಯು ವಿಭಾಗದೊಳಗೆ ಪ್ರವೇಶಿಸಿದ್ದಾರೆ. ಇದರಿಂದ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳು ಹಾಗೂ ಸಿಬ್ಬಂದಿ ಕೆಲಕಾಲ ಆತಂಕಕ್ಕೊಳಗಾದರು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಳಿಕ ಇಬ್ಬರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಆಸ್ಪತ್ರೆಯಂತಹ ಸೂಕ್ಷ್ಮ ಪ್ರದೇಶದಲ್ಲಿ ಈ ರೀತಿಯ ನಿರ್ಲಕ್ಷ್ಯ ವರ್ತನೆ ಖಂಡನೀಯವಾಗಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Related Articles

Leave a Reply

Your email address will not be published. Required fields are marked *

Back to top button