ಮಹಾಸಂಪರ್ಕ ಅಭಿಯಾನ: ಮನೆ ಮನೆಗೆ ಎಸ್ಐಆರ್ ಮತದಾರರ ಪಟ್ಟಿ ಜಾಗೃತಿ
ಮತದಾರರ ಪಟ್ಟಿಯ ಪರಿಶೀಲನೆಗೆ ಬಿಜೆಪಿ ಕಾರ್ಯಕರ್ತರಿಂದ ಮನೆ-ಮನೆ ಭೇಟಿ; ಎಸ್ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯ ಭಾಗವಹಿಸುವಂತೆ ಮನವಿ

ಬೀದರ್, ಜು.27: ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ನಿರ್ದೇಶನದಂತೆ ನಡೆಯುತ್ತಿರುವ ಎಸ್ಐಆರ್ (Special Intensive Revision) ಮತದಾರರ ಪಟ್ಟಿ ಪರಿಷ್ಕರಣೆ ಮಹಾಸಂಪರ್ಕ ಅಭಿಯಾನದ ಅಂಗವಾಗಿ ಬೀದರ್ ನಗರದ ವಾರ್ಡ್ ಸಂಖ್ಯೆ 18ರ ಬೂತ್ ಸಂಖ್ಯೆ 156ರಲ್ಲಿ ಬಿಜೆಪಿ ಮುಖಂಡ ಈಶ್ವರಸಿಂಗ್ ಠಾಕೂರ್ ಅವರ ನೇತೃತ್ವದಲ್ಲಿ ಮನೆ-ಮನೆ ಭೇಟಿ ನೀಡಿ ಮತದಾರರಲ್ಲಿ ಜಾಗೃತಿ ಮೂಡಿಸಲಾಯಿತು.
ಅಭಿಯಾನದ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮತದಾರರನ್ನು ಭೇಟಿ ಮಾಡಿ ಎಸ್ಐಆರ್ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾಹಿತಿ ನೀಡಿದರು. ಮತದಾರರ ಪಟ್ಟಿಯಲ್ಲಿರುವ ಹೆಸರು, ವಿಳಾಸ ಸೇರಿದಂತೆ ವೈಯಕ್ತಿಕ ವಿವರಗಳನ್ನು ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು. ಮತದಾರರು ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಮಾಹಿತಿಯನ್ನು ಸರಿಪಡಿಸಿಕೊಳ್ಳಬೇಕು ಎಂದು ಕರೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಈಶ್ವರಸಿಂಗ್ ಠಾಕೂರ್, ಮಹಾನಗರ ಪಾಲಿಕೆ ಸದಸ್ಯೆ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಉಲ್ಲಾಸಿನಿ ವಿಕ್ರಂ ಮುದ್ದಾಳೆ, ವಾರ್ಡ್ ಅಧ್ಯಕ್ಷ ವಿಕ್ರಂ ಮುದ್ದಾಳೆ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಮಹಾನಂದ ಪಾಟೀಲ್, ಶ್ರೀಮತಿ ಸವಿತಾ, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಬಿಎಲ್ಎ ರಾಜು ಪಾಟೀಲ್, ವಾರ್ಡ್ ಪ್ರಮುಖರಾದ ಚಂದ್ರಕಾಂತ್ ಜೋಪಟೆ, ಸಂಜು ಕುಮಾರ್ ಕೆಂಚೆ, ಧನರಾಜ್ ಮಡಿಕೆ, ವೈಜನಾಥ ಸ್ವಾಮಿ, ರವೀಂದ್ರ ದಯೋಡೆ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



