ಅಪಘಾತ

ಟ್ರ್ಯಾಕ್ಟರ್ ಪಲ್ಟಿಯಾಗಿ ಯುವಕ ದುರ್ಮರಣ

ಕೀಟನಾಶಕ ಸಿಂಪಡಿಸಲು ತೆರಳಿದ್ದ ವೇಳೆ ಅವಘಡ; ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಸ್ಥಳದಲ್ಲೇ ಸಾವು

ಜೇವರ್ಗಿ, ಜು.28: ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಹಳ್ಳಕ್ಕೆ ಪಲ್ಟಿಯಾಗಿ ಬಿದ್ದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲೂಕಿನ ಅಂದೋಲಾ ಗ್ರಾಮದಲ್ಲಿ ಸಂಭವಿಸಿದೆ.

ಮೃತ ಯುವಕನನ್ನು ಆಕಾಶ್ ಮಹಾಂತೇಶ್ ರಾಠೋಡ್ (23) ಎಂದು ಗುರುತಿಸಲಾಗಿದೆ.

ಆಕಾಶ್ ಅವರು ಜಮೀನಿಗೆ ಕೀಟನಾಶಕ ಸಿಂಪಡಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ವಾಹನದ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿದೆ. ಈ ವೇಳೆ ಟ್ರ್ಯಾಕ್ಟರ್ ಕೆಳಗೆ ಸಿಲುಕಿದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button