ಜುಲೈ 23ರಂದು ಕಾಂಗ್ರೆಸ್ ಕಚೇರಿಯಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರ ಜಯಂತಿ ಆಚರಣೆ
ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಭಾಗವಹಿಸುವಂತೆ ಆಹ್ವಾನ

ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜುಲೈ 23ರಂದು ಬೆಳಿಗ್ಗೆ 10 ಗಂಟೆಗೆ ಸ್ವಾತಂತ್ರ್ಯ ಹೋರಾಟಗಾರ, ರಾಷ್ಟ್ರನಾಯಕ ಲೋಕಮಾನ್ಯ ಬಾಲಗಂಗಾಧರ ತಿಲಕರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯ ಜಗದೇವ್ ಗುಟ್ಟೇದಾರ್ ಕಾಳಗಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ-ಮಂಡಳಿ-ಪ್ರಾಧಿಕಾರಗಳ ಅಧ್ಯಕ್ಷರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು, ಡಿಸಿಸಿ ಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಎಪಿಎಂಸಿ ಸದಸ್ಯರು, ಮಹಾನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಮೇಯರ್, ಉಪಮೇಯರ್ ಮತ್ತು ಸದಸ್ಯರು, ಮಹಿಳೆಯರು, ಯುವಕರು ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.



