ಅಪರಾಧ

ಸಾಲದ ಹಣ ಕೇಳಿದ್ದಕ್ಕೆ ಮನೆಗೆ ನುಗ್ಗಿ ತಾಯಿ-ಮಗಳ ಮೇಲೆ ಚಾಕು ದಾಳಿ

₹1.50 ಲಕ್ಷ ಸಾಲ ವಾಪಸ್ ಕೇಳಿದ್ದಕ್ಕೆ ಹಲ್ಲೆ ಆರೋಪ; ಇಬ್ಬರು ಮಹಿಳೆಯರು ಆಸ್ಪತ್ರೆಗೆ ದಾಖಲು

ಬೀದರ್, ಜು.29: ಸಾಲವಾಗಿ ನೀಡಿದ್ದ ಹಣವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ತಾಯಿ ಮತ್ತು ಮಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಗರದ ವೃತ್ತ ರಸ್ತೆಯ ಗುಂಪಾ ರಸ್ತೆ ಸಮೀಪ ನಡೆದಿದೆ.

ಹಲ್ಲೆಯಲ್ಲಿ ಶೋಭಾ (45) ಹಾಗೂ ಅವರ ಪುತ್ರಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿಯಂತೆ, ಶೋಭಾ ಅವರು ಸತೀಶ್ ರೆಡ್ಡಿ ಎಂಬಾತನಿಗೆ ಸುಮಾರು ₹1.50 ಲಕ್ಷ ಸಾಲ ನೀಡಿದ್ದರು. ಹಲವು ಬಾರಿ ಹಣವನ್ನು ಹಿಂದಿರುಗಿಸುವಂತೆ ಕೇಳಿದರೂ ಮರಳಿಸದ ಹಿನ್ನೆಲೆಯಲ್ಲಿ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ವಿಚಾರದಿಂದ ಆಕ್ರೋಶಗೊಂಡ ಆರೋಪಿ ಶೋಭಾ ಅವರ ಮನೆಗೆ ನುಗ್ಗಿ, ಅವರ ಹಾಗೂ ಪುತ್ರಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button