ಧಾರ್ಮಿಕ

ಬಿಗವಾನ್ ಆಶ್ರಮದಲ್ಲಿ ಗುರು ಪೂರ್ಣಿಮೆ ಸಂಭ್ರಮ: ಗುರುವಿಗೆ ಭಕ್ತರಿಂದ ಗೌರವ ಸಮರ್ಪಣೆ

ಮಹಾರಾಷ್ಟ್ರದ ಆಶ್ರಮದಲ್ಲಿ ಭಕ್ತಿಭಾವದ ಆಚರಣೆ; ವಿವಿಧೆಡೆಯಿಂದ ಆಗಮಿಸಿದ ಭಕ್ತರಿಗೆ ಆಶೀರ್ವಾದ

ಮಹಾರಾಷ್ಟ್ರದ ಪುಣೆ ಜಿಲ್ಲೆಯ ದೌಂಡ್ ತಾಲ್ಲೂಕಿನ ಬಿಗವಾನ್ ಆಶ್ರಮದಲ್ಲಿ ಗುರು ಪೂರ್ಣಿಮೆಯನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಗುರುಗಳಿಗೆ ಗೌರವ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜರಿಗೆ ಭಕ್ತರು ಭಕ್ತಿಪೂರ್ವಕವಾಗಿ ವಂದನೆ ಸಲ್ಲಿಸಿದರು. ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಗುರುಗಳ ದರ್ಶನ ಪಡೆದು, ಪಾದಪೂಜೆ ನೆರವೇರಿಸಿ, ಹೂಮಾಲೆ ಅರ್ಪಿಸಿ, ಶಾಲು ಹೊದಿಸಿ ಸತ್ಕರಿಸಿದರು.

ಹವಾ ಮಲ್ಲಿನಾಥ ಮಹಾರಾಜರು ಭಕ್ತರಿಗೆ ಪ್ರಸಾದ ವಿತರಿಸಿ ಆಶೀರ್ವಚನ ನೀಡಿದರು. ಗುರು ಭಕ್ತಿ, ಸೇವೆ ಹಾಗೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ಕಾರ್ಯಕ್ರಮವನ್ನು ಮಾಜಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರೇಮಾ ಆರ್. ಪಾಟೀಲ, ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ಭಾಲ್ಕಿ ತಾಲ್ಲೂಕು ಅಧ್ಯಕ್ಷ ಪಪ್ಪು ಪಾಟೀಲ ಖಾನಾಪುರ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button