ರಾಜಕೀಯ

ಎಸ್‌ಐಆರ್ ಕುರಿತು ಕಲಬುರಗಿಯಲ್ಲಿ ಕಾಂಗ್ರೆಸ್ ಸಭೆ ನಾಳೆ

ಆಗಸ್ಟ್‌ 1ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹತ್ವದ ಸಭೆ; ಪಕ್ಷದ ನಾಯಕರು, ಜನಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳಿಗೆ ಆಹ್ವಾನ

ಕಲಬುರಗಿ, ಜು.31: ಮತ ಪರಿಷ್ಕರಣೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚರ್ಚಿಸಲು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆಗಸ್ಟ್‌ 1ರಂದು ಬೆಳಿಗ್ಗೆ 11 ಗಂಟೆಗೆ ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಕಾಳಗಿ ತಿಳಿಸಿದ್ದಾರೆ.

ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ವಸಂತಕುಮಾರ್, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ, ವಿಧಾನ ಪರಿಷತ್ ಸದಸ್ಯೆ ಹಾಗೂ ಜಿಲ್ಲೆಯ ಎಸ್‌ಐಆರ್ ವೀಕ್ಷಕಿ ಶ್ರೀಮತಿ ಉಮಾಶ್ರೀ ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಭೆಗೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ-ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು, ಕೆಪಿಸಿಸಿ ಮತ್ತು ಡಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು, ಡಿಸಿಸಿ ಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಕಾರ್ಯಕರ್ತರನ್ನು ಆಹ್ವಾನಿಸಲಾಗಿದೆ.

ಇದಲ್ಲದೆ, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಎಪಿಎಂಸಿ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಮಹಾನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಮಹಾಪೌರರು, ಉಪ ಮಹಾಪೌರರು, ಮಹಿಳಾ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸುವಂತೆ ಜಗದೇವ್ ಗುತ್ತೇದಾರ್ ಕಾಳಗಿ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button