ಧಾರ್ಮಿಕ

ಜುಲೈ 6ರಂದು ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಧರ್ಮ ಸಮಾರಂಭ

ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ಮಾಲಾಧಾರಿಗಳ ರಜತ ಮಹೋತ್ಸವ; ಮಕ್ತಂಪುರದ ಬಸವಣ್ಣ ದೇವಸ್ಥಾನದಲ್ಲಿ ಕಾರ್ಯಕ್ರಮ

ಕಲಬುರಗಿಯ ಮಕ್ತಂಪುರ ಬಡಾವಣೆಯ ಶ್ರೀ ಬಸವಣ್ಣ ದೇವಸ್ಥಾನದ ಪ್ರಾಂಗಣದಲ್ಲಿ ಜುಲೈ 6ರಂದು ಸಂಜೆ ಬಾಳೆಹೊನ್ನೂರಿನ ಶ್ರೀಮದ್ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ ಧರ್ಮ ಸಮಾರಂಭ ಹಾಗೂ ಶ್ರೀ ಜಗದ್ಗುರು ರೇವಣಸಿದ್ಧೇಶ್ವರ ಮಾಲಾಧಾರಿಗಳ ರಜತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.

ಶ್ರೀ ಜಗದ್ಗುರು ರೇವಣಸಿದ್ದೇಶ್ವರ ಸಂಘದ ಸಹಯೋಗದಲ್ಲಿ ಆಯೋಜಿಸಿರುವ ಈ ಸಮಾರಂಭದಲ್ಲಿ ಶ್ರೀನಿವಾಸ ಸರಡಗಿ, ಹೊನ್ನಕಿರಣಗಿ ಹಾಗೂ ಸ್ಟೇಶನ್ ಬಬಲಾದ ಪಾಳಾ ಶ್ರೀಗಳು ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳ ಗಣ್ಯರು ಮತ್ತು ಭಕ್ತರು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಧಾರ್ಮಿಕ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಪ್ರಸಾರ ಮತ್ತು ಸಮಾಜದಲ್ಲಿ ಸೌಹಾರ್ದತೆಯ ಸಂದೇಶ ಸಾರುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಪ್ರಮುಖರಾದ ಸಿದ್ರಾಮಪ್ಪ ಆಲಗೂಡಕರ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button