ಜಿಲ್ಲಾಸುದ್ದಿ

ಚಿತ್ತಾಪುರ: ಕಳೆದು ಹೋದ ಮೂರು ಮೊಬೈಲ್‌ಗಳು ವಾರಸುದಾರರ ಕೈಗೆ..!

ಚಿತ್ತಾಪುರ, ಜೂ.೨೯- ಸಾರ್ವಜನಿಕರು ಕಳೆದುಕೊಂಡಿದ್ದ ಮೊಬೈಲ್‌ಗಳನ್ನು ಪತ್ತೆ ಹಚ್ಚುವಲ್ಲಿ ಸ್ಥಳೀಯ ಪೊಲೀಸ್ ಠಾಣೆ ಮತ್ತೊಮ್ಮೆ ಯಶಸ್ಸು ಸಾಧಿಸಿದೆ. ಇತ್ತೀಚೆಗೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಒಟ್ಟು ಮೂರು ಮೊಬೈಲ್ ಫೋನ್‌ಗಳನ್ನು ಸಿಇಐಆರ್ (ಸೆಂಟ್ರಲ್ ಇಕ್ಯಪಮೆಂಟ್ಸ್ ಐಡೆಂಟಿಟಿ ರಜಿಸ್ಟರ್) ಪೋರ್ಟಲ್ ಮೂಲಕ ಪತ್ತೆಹಚ್ಚಿ, ಅವುಗಳನ್ನು ಕಾನೂನುಬದ್ಧ ವಾರಸುದಾರರಿಗೆ ಹಿಂತಿರುಗಿಸಲಾಯಿತು.

ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೊಬೈಲ್‌ಗಳನ್ನು ಪತ್ತೆಹಚ್ಚಿ, ಸಂಬAಧಿತ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಮಾಲೀಕರಿಗೆ ಹಸ್ತಾಂತರಿಸಲಾಯಿತು. ತಮ್ಮ ಕಳೆದುಹೋಗಿದ್ದ ಮೊಬೈಲ್‌ಗಳನ್ನು ಮರಳಿ ಪಡೆದ ಸಾರ್ವಜನಿಕರು ಪೊಲೀಸ್ ಇಲಾಖೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮಹತ್ವದ ಮಾಹಿತಿ ನೀಡಿರುವ ಪೊಲೀಸರು, ಮೊಬೈಲ್ ಫೋನ್ ಕಳೆದುಹೋದ ತಕ್ಷಣವೇ ಸಿಇಐಆರ್ ಪೋರ್ಟಲ್ ಮೂಲಕ ದೂರು ದಾಖಲಿಸಿದರೆ, ಮೊಬೈಲ್ ಪತ್ತೆಹಚ್ಚಲು ಹಾಗೂ ದುರುಪಯೋಗವನ್ನು ತಡೆಯಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.

(ಸೆಂಟ್ರಲ್ ಇಕ್ಯಪಮೆಂಟ್ಸ್ ಐಡೆಂಟಿಟಿ ರಜಿಸ್ಟರ್) ಪೋರ್ಟಲ್ ಮೂಲಕ ಸಾರ್ವಜನಿಕರು ತಮ್ಮ ಕಳೆದುಹೋದ ಮೊಬೈಲ್ ಕುರಿತು ದೂರು ದಾಖಲಿಸಬಹುದಾಗಿದ್ದು, ಇದರಿಂದ ಮೊಬೈಲ್ ಅನ್ನು ಬ್ಲಾಕ್ ಮಾಡುವುದಕ್ಕೂ ಹಾಗೂ ಪತ್ತೆಹಚ್ಚುವ ಪ್ರಕ್ರಿಯೆಗೂ ಸಹಕಾರಿಯಾಗುತ್ತದೆ. ಸಾರ್ವಜನಿಕರ ಆಸ್ತಿ ಸುರಕ್ಷತೆಗೆ ಆದ್ಯತೆ ನೀಡುತ್ತಿರುವ  ಜಿಲ್ಲಾ ಪೊಲೀಸ್ ಇಲಾಖೆ, ಕಳೆದು ಹೋದ ಮೊಬೈಲ್‌ಗಳನ್ನು ಪತ್ತೆಹಚ್ಚಿ ಮಾಲೀಕರಿಗೆ ಹಿಂದಿರುಗಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸುತ್ತಿದ್ದು, ಅಗತ್ಯ ಸಂದರ್ಭದಲ್ಲಿ ಸಿಇಐಆರ್ ಪೋರ್ಟಲ್ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಅವರು ಮನವಿ ಮಾಡಿದರು.

Related Articles

Leave a Reply

Your email address will not be published. Required fields are marked *

Back to top button