ಅಪಘಾತಜಿಲ್ಲಾಸುದ್ದಿ

ವಿದ್ಯುತ್ ತಗುಲಿ ಯುವಕ ಸಾವು

ಮೋಟಾರ್ ಚಾಲನೆ ಮಾಡಲು ತೆರಳಿದ ವೇಳೆ ದುರ್ಘಟನೆ; ಆಳಂದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಲಬುರಗಿ, ಆ.16: ವಿದ್ಯುತ್ ತಗುಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಆಳಂದ್ ಪಟ್ಟಣದ ನ್ಯೂ ಅನ್ಸಾರಿ ಗಲ್ಲಿಯಲ್ಲಿ ಸಂಭವಿಸಿದೆ.

ಮೃತ ಯುವಕನನ್ನು ಉಮರ್ ಬಾಕರ್ ಅನ್ಸಾರಿ (25) ಎಂದು ಗುರುತಿಸಲಾಗಿದೆ. ಬೆಳಗ್ಗೆ ನಲ್ಲಿಯಲ್ಲಿ ನೀರು ಬಂದಿದ್ದ ಹಿನ್ನೆಲೆಯಲ್ಲಿ ಮೋಟಾರ್ ಚಾಲನೆ ಮಾಡಲು ತೆರಳಿದ ವೇಳೆ ವಿದ್ಯುತ್ ಅವಘಡ ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಆಳಂದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button