ಜಿಲ್ಲಾಸುದ್ದಿ

ದೇವರಾಜ ಅರಸು ಜಯಂತ್ಯೋತ್ಸವ ಸಮಿತಿಗೆ ನ್ಯಾಯವಾದಿ ವಿನೋದಕುಮಾರ್ ಜೆ. ಸಾರಥ್ಯ

111ನೇ ಜಯಂತ್ಯೋತ್ಸವವನ್ನು ಯಶಸ್ವಿಯಾಗಿ ಆಚರಿಸಲು ಜಿಲ್ಲಾಡಳಿತದಿಂದ ಪೂರ್ವಭಾವಿ ಸಭೆ

ಕಲಬುರಗಿ, ಆ.18: ಹಿಂದುಳಿದ ವರ್ಗಗಳ ಹರಿಕಾರ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜಯಂತ್ಯೋತ್ಸವವನ್ನು ಯಶಸ್ವಿಯಾಗಿ ಆಚರಿಸುವ ಉದ್ದೇಶದಿಂದ ಕಲಬುರಗಿ ಜಿಲ್ಲಾ ದೇವರಾಜ ಅರಸು ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಾಗಿ ಸಾಮಾಜಿಕ ನ್ಯಾಯಕ್ಕಾಗಿ ಸದಾ ಹೋರಾಡುತ್ತಿರುವ ನ್ಯಾಯವಾದಿ ವಿನೋದಕುಮಾರ್ ಜೆ. ಜೇನವೇರಿ ಅವರನ್ನು ಜಿಲ್ಲಾಡಳಿತದ ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಈ ಕುರಿತು ಆದೇಶ ಹೊರಡಿಸಿದ್ದು, ಜಯಂತ್ಯೋತ್ಸವದ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನಡೆಸುವ ಜವಾಬ್ದಾರಿಯನ್ನು ಸಮಿತಿಯ ಅಧ್ಯಕ್ಷರಾದ ವಿನೋದಕುಮಾರ್ ಜೆ. ಜೇನವೇರಿ ಅವರಿಗೆ ಅಧಿಕೃತವಾಗಿ ವಹಿಸಲಾಗಿದೆ.

ಜಿಲ್ಲೆಯ ಹಿಂದುಳಿದ ವರ್ಗಗಳು, ವಿವಿಧ ಜಾತಿ ಸಮುದಾಯಗಳು ಹಾಗೂ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ದೇವರಾಜ ಅರಸು ಜಯಂತ್ಯೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಸಮಿತಿಯ ಅಧ್ಯಕ್ಷರು ಮನವಿ ಮಾಡಿದ್ದಾರೆ.

ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ನಾಯಕರಾಗಿದ್ದಾರೆ. ಅವರ ಆದರ್ಶಗಳು ಹಾಗೂ ಜನಪರ ಕಾರ್ಯಗಳನ್ನು ಸ್ಮರಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಜಯಂತ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿವಿಧ ಯೋಜನೆಗಳ ಪ್ರಯೋಜನ ಪಡೆದ ಪ್ರತಿಯೊಬ್ಬರೂ ಕಾರ್ಯಕ್ರಮಕ್ಕೆ ತಪ್ಪದೇ ಆಗಮಿಸಬೇಕು ಎಂದು ವಿನೋದಕುಮಾರ್ ಜೆ. ಜೇನವೇರಿ ಮನವಿ ಮಾಡಿದ್ದಾರೆ. ಅಲ್ಲದೆ, ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಮಾಜದ ಗಣ್ಯ ವ್ಯಕ್ತಿಗಳಿಗೆ ಆಹ್ವಾನ ಪತ್ರಿಕೆ ನೀಡುವಂತೆ ಸಂಬಂಧಿಸಿದವರಿಗೆ ಸೂಚಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button