ಜಿಲ್ಲಾಸುದ್ದಿ

ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಡಿ. ದೇವರಾಜ ಅರಸು ಜಯಂತಿ ಆಚರಣೆ

ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಿಂದ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಕಲಬುರಗಿ, ಆ.20: ನಗರದ ಜಿಮ್ಸ್ ಜಿಲ್ಲಾ ಆಸ್ಪತ್ರೆಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಜಿಮ್ಸ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ. ರೂಕೀಯ ಆಸ್ನಾ ರಬಾ ಅವರು ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಓಪಿಡಿ ಸರ್ಜನ್ ಡಾ. ಶಾಲಿನಿ ಸಜ್ಜನಶೆಟ್ಟಿ, ಸ್ಥಳೀಯ ವೈದ್ಯಾಧಿಕಾರಿಗಳಾದ ಡಾ. ಓಂಪ್ರಕಾಶ್ ಅಂಬೂರೆ, ಡಾ. ನಾಗರಾಜ್ ಪಾಟೀಲ, ಡಾ. ಸಂತೋಷ್, ಡಾ. ನಿಶಾಂತ್ ಪಣೇಗಾಂವ್, ಡಾ. ಜಯಮ್ಮ ಎಸ್. ಗಣಜಲಖೇಡ್, ಮುಖ್ಯ ವೈದ್ಯಾಧಿಕಾರಿ ಡಾ. ವಿನೋದ್ ಕುಮಾರ್ ಹೊಸಳ್ಳಿ, ಕಚೇರಿ ಅಧೀಕ್ಷಕ ವಿಜಯಕುಮಾರ್ ಸಂಕಾ, ಎಚ್‌ಎಫ್‌ಡಬ್ಲ್ಯೂ ಇಮ್ತಿಯಾಜ್ ಸೇರಿದಂತೆ ಆಸ್ಪತ್ರೆಯ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಆಶಯಗಳು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button