ಜಿಲ್ಲಾಸುದ್ದಿ

ಪೌಷ್ಟಿಕ ಆಹಾರದಿಂದ ಶಿಶು ರಕ್ಷಣೆ: ಭಾಷಾ ಪಟೇಲ್ ಯಾಳವಾರ್

ಜೇವರ್ಗಿ, ಸೆ.11: ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸುವುದರಿಂದ ಗರ್ಭದಲ್ಲಿರುವ ಮಗುವಿನ ಆರೋಗ್ಯವನ್ನು ಉತ್ತಮಪಡಿಸಲು ಸಾಧ್ಯ. ಈ ನಿಟ್ಟಿನಲ್ಲಿ ಗರ್ಭಿಣಿಯರು ಪೌಷ್ಟಿಕ ಆಹಾರ ಸೇವನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಕೀಲರ ಸಂಘದ ಉಪಾಧ್ಯಕ್ಷ ಭಾಷಾ ಪಟೇಲ್ ಮಾಲಿಪಾಟೀಲ್ ಯಾಳವಾರ್ ಹೇಳಿದರು.

ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ಶಿಶು ಯೋಜನೆ ಹಾಗೂ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳಿಗಾಗಿ ನಡೆದ ಪೌಷ್ಟಿಕ ಆಹಾರ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗರ್ಭಾವಸ್ಥೆಯಲ್ಲಿ ಪೌಷ್ಟಿಕ ಆಹಾರ ಸೇವಿಸುವುದು ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಗರ್ಭದಲ್ಲಿರುವ ಮಗುವಿನ ಬೆಳವಣಿಗೆಯಲ್ಲಿ ತಾಯಿಯ ಆಹಾರ ಪದ್ಧತಿ ಪ್ರಮುಖ ಪಾತ್ರ ವಹಿಸುತ್ತದೆ. ಭ್ರೂಣದ ಹಂತದಿಂದ ಹಿಡಿದು ಹೆರಿಗೆಯ ನಂತರ ನವಜಾತ ಶಿಶುವಿನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಮೇಲೂ ತಾಯಿಯ ಪೌಷ್ಟಿಕ ಆಹಾರ ಸೇವನೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಗರ್ಭಿಣಿಯರು ಮಾನಸಿಕ ಸಮತೋಲನ ಕಾಪಾಡಿಕೊಳ್ಳುವುದರಿಂದ ಗರ್ಭದಲ್ಲಿರುವ ಮಗುವಿನ ಮಾನಸಿಕ ಸ್ಥಿತಿಯೂ ಉತ್ತಮವಾಗಿರುತ್ತದೆ. ಆದ್ದರಿಂದ ಸಮತೋಲಿತ ಹಾಗೂ ಪೌಷ್ಟಿಕ ಆಹಾರ ಸೇವಿಸುವ ಮೂಲಕ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ರಾಜಶೇಖರ ಶಿಲ್ಪಿ, ತ್ರಿವೇಣಿ ಪಾಟೀಲ ಕುರುಳಗೇರಾ, ನಾಗವೇಣಿ ಧನ್ನಾ, ಮಹೇಶ ರಾಠೋಡ್, ರಾಜಾಪಟೇಲ್ ಯಾಳವಾರ್, ಬಾಬು ಬಿ. ಪಾಟೀಲ, ಹುಸೇನ ನಾಯಿಕರ್ ಸೇರಿದಂತೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button