ಜಿಲ್ಲಾಸುದ್ದಿ

ಉತ್ತಮ ಶಿಕ್ಷಕ ಪ್ರಶಸ್ತಿಗೆ ವಿಶ್ವನಾಥ ರಾಠೋಡ್ ಭಾಜನ

ಚಿತ್ತಾಪುರ, ಸೆ.13: ಕರ್ನಾಟಕ ರಾಜ್ಯ ಪ್ರೈಸ್ ಪ್ರಾಂಶುಪಾಲರ ಸಂಘ ಹಾಗೂ ವಸತಿ ಶಾಲಾ ನೌಕರರ ಸಂಘದ ಜಿಲ್ಲಾ ಘಟಕಗಳ ಸಂಯುಕ್ತಾಶ್ರಯದಲ್ಲಿ ನಡೆದ 2026-27ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ವಸತಿ ಶಾಲಾ ನೌಕರರ ಶೈಕ್ಷಣಿಕ ಸಮಾವೇಶದಲ್ಲಿ ವಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ವಿಶ್ವನಾಥ ರಾಠೋಡ್ ಅವರಿಗೆ ಉತ್ತಮ ಚಿತ್ರಕಲಾ ಶಿಕ್ಷಕ ಪುರಸ್ಕಾರ ನೀಡಿ ಗೌರವಿಸಲಾಯಿತು.

ಶಿಕ್ಷಕರು ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸುವ ಮೂಲಕ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಕ್ಕೆ ಕೀರ್ತಿ ತಂದಿದ್ದಾರೆ. ಅವರ ಶೈಕ್ಷಣಿಕ ಹಾಗೂ ಕಲಾ ಕ್ಷೇತ್ರದ ಸೇವೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಉತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಆರ್‌ಎಸ್‌ಇ ಅಧ್ಯಕ್ಷ ಆನಂದ ಕೊಡೇಕಲ್, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಬೆಳಗುಂಪಿ, ಕೆಎಸ್‌ಕೆಪಿಎ ಅಧ್ಯಕ್ಷ ಶಿವರಾಮ ಚವ್ಹಾಣ್ ಹಾಗೂ ಪ್ರಧಾನ ಕಾರ್ಯದರ್ಶಿ ಈರಣ್ಣ ಅರಿಕೇರಾ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button