ಜಿಲ್ಲಾಸುದ್ದಿ
ಕ್ರೀಡೆಗಳಿಂದ ದೈಹಿಕವಾಗಿ ಸದೃಢರಾಗಲು ಸಾಧ್ಯ: ಶಿವಪುತ್ರ ಬೀರ್‌ಗೊಂಡ

ಜೇವರ್ಗಿ, ಸೆ.13: ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ ಸದೃಢರಾಗುವುದರ ಜೊತೆಗೆ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಪುತ್ರ ಬೀರ್‌ಗೊಂಡ ಹೇಳಿದರು.
ಪಟ್ಟಣದ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಯಾವುದಾದರೂ ಒಂದು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ನಿಯಮಿತವಾಗಿ ಪಾಲ್ಗೊಳ್ಳಬೇಕು. ಇದರಿಂದ ದೈಹಿಕ ಸಾಮರ್ಥ್ಯ ವೃದ್ಧಿಯಾಗುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ರೀಡಾಂಗಣದ ವ್ಯವಸ್ಥಾಪಕ ಸಂಗಮೇಶ ಕೊಂಬಿನ್, ಅಶೋಕ ಆಲೂರು, ಶಿಕ್ಷಕರಾದ ಮಹಾಂತೇಶ ಮುದ್ದಡಗಿ, ಮಲ್ಲಣ್ಣ ಬಂಗಾರಿ, ನಿಂಗಣ್ಣಗೌಡ ಪಾಟೀಲ, ಬಸವರಾಜ ಪಾಟೀಲ, ಸಿದ್ದಣ್ಣಗೌಡ, ರಾಮಚಂದ್ರ, ಶಿವಕುಮಾರ ನರೋಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



