ಜಿಲ್ಲಾಸುದ್ದಿ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಡಾ. ಕಿರಣ್ ದೇಶಮುಖ್ ನಾಳೆ ಪದಗ್ರಹಣ

ಕಲಬುರಗಿ, ಸೆ.13: ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ಕಿರಣ್ ದೇಶಮುಖ್ ಅವರು ಸೆ.15ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ನಗರದ ರಾಜಾಪುರ ರಸ್ತೆಯಲ್ಲಿರುವ ಜೈ ಭವಾನಿ ಕನ್ವೆನ್ಷನ್ ಹಾಲ್‌ನಲ್ಲಿ ಸೆ.15ರಂದು ಸಂಜೆ 4 ಗಂಟೆಗೆ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವಪ್ಪ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.

ಪದಗ್ರಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಹಾಲಿ ಹಾಗೂ ಮಾಜಿ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ–ಮಂಡಳಿ–ಪ್ರಾಧಿಕಾರಗಳ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಮತ್ತು ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು, ಡಿಸಿಸಿ ಡೆಲಿಗೇಟ್ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯ ವಿವಿಧ ಮುಂಚೂಣಿ ಘಟಕಗಳು ಮತ್ತು ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ.

ಅದೇ ರೀತಿ ಎಪಿಎಂಸಿ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಪಾಲಿಕೆಯ ಹಾಲಿ ಹಾಗೂ ಮಾಜಿ ಮಹಾಪೌರರು, ಉಪ ಮಹಾಪೌರರು ಹಾಗೂ ಸದಸ್ಯರು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್ ಸೇರಿದಂತೆ ಪಕ್ಷದ ಎಲ್ಲ ಮುಂಚೂಣಿ ಘಟಕಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಗದೇವಪ್ಪ ಗುತ್ತೇದಾರ ಕಾಳಗಿ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button