ಜಿಲ್ಲಾಸುದ್ದಿ

ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳೇ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರಾಗಿ ಪಾತ್ರ ನಿರ್ವಹಣೆ

ಬೀದರ್, ಸೆ.19: ಶಿಕ್ಷಕರ ದಿನಾಚರಣೆ ಅಂಗವಾಗಿ ಬಸವಕಲ್ಯಾಣ ತಾಲ್ಲೂಕಿನ ಚಿಕನಾಗಾಂವವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಪಾತ್ರಾಭಿನಯ ಹಾಗೂ ಜವಾಬ್ದಾರಿ ನಿರ್ವಹಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಎಸ್‌ಡಿಎಂಸಿ ಸದಸ್ಯರು, ಮುಖ್ಯಶಿಕ್ಷಕರು ಹಾಗೂ ಶಿಕ್ಷಕರ ಪಾತ್ರ ನಿರ್ವಹಿಸಿ ಗಮನ ಸೆಳೆದರು.

ವಿದ್ಯಾರ್ಥಿಗಳು ಒಂದು ದಿನದ ಮಟ್ಟಿಗೆ ಎಸ್‌ಡಿಎಂಸಿ ಸದಸ್ಯರು, ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿಯ ಜವಾಬ್ದಾರಿಗಳನ್ನು ನಿರ್ವಹಿಸಿದರು. ಮುಖ್ಯಶಿಕ್ಷಕರ ಕುರ್ಚಿಯಲ್ಲಿ ಕುಳಿತು ಶಾಲೆಯ ಕಾರ್ಯವೈಖರಿಯನ್ನು ಅರಿತುಕೊಂಡ ವಿದ್ಯಾರ್ಥಿಗಳು, ಶಿಕ್ಷಕರಾಗಿ ಬೋಧನೆ ಮಾಡುವುದರ ಜೊತೆಗೆ ವಿವಿಧ ಶಾಲಾ ಚಟುವಟಿಕೆಗಳಲ್ಲಿಯೂ ಭಾಗವಹಿಸಿದರು.

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಜವಾಬ್ದಾರಿಯ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮುಖ್ಯಶಿಕ್ಷಕ ಸೈಮನ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರಾಜಕುಮಾರ ಕನಕೂರೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಚ್ಚೇಂದ್ರ ದೇವಬಾ, ಶಿಕ್ಷಕರಾದ ರಾಘವೇಂದ್ರ, ರಾಹುಲ್, ಅಶ್ವಿನಿ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button