ಜಿಲ್ಲಾಸುದ್ದಿ

ಸೆ.20ರಂದು ಕಲಬುರಗಿಯಲ್ಲಿ ವಿದ್ಯುತ್ ನೌಕರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಕಲಬುರಗಿ, ಸೆ.19: ಕೆಪಿಟಿಸಿಎಲ್ ಹಾಗೂ ಜೆಸ್ಕಾಂ ನೌಕರರ ಪತ್ನಿಯರ ಸಹಕಾರ ಸಂಘದ 54ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ 20ರಂದು ಬೆಳಿಗ್ಗೆ 10.30ಕ್ಕೆ ನಗರದ ಹೊಸ ಜೇವರ್ಗಿ ರಸ್ತೆಯಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಭಾ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಾಬು ಕೋರೆ ತಿಳಿಸಿದ್ದಾರೆ.

ಮಹಾಸಭೆಯಲ್ಲಿ ಹಿಂದಿನ ವಾರ್ಷಿಕ ಮಹಾಸಭೆಯ ನಡಾವಳಿಗಳ ದೃಢೀಕರಣ, 2025–26ನೇ ಸಾಲಿನ ಲೆಕ್ಕಪತ್ರ ಹಾಗೂ ಡಾಕ್ಟರ್ ಪರಿಶೋಧನಾ ವರದಿ ಅನುಮೋದನೆ, 2026–27ನೇ ಸಾಲಿನ ಆಡಳಿತ ಮಂಡಳಿ ವರದಿ, ಆಯವ್ಯಯ ಪತ್ರ, ಬಜೆಟ್, ಲಾಭ ಹಂಚಿಕೆ ಸೇರಿದಂತೆ ಸಂಘದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸಂಘದ ಎಲ್ಲ ಸದಸ್ಯರು ಕಡ್ಡಾಯವಾಗಿ ಮಹಾಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಬಾಬು ಕೋರೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button