ಅಪಘಾತ
ರೈಲಿಗೆ ತಲೆಕೊಟ್ಟು ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ, ಸೆ.25- ರೈಲಿಗೆ ತಲೆಕೊಟ್ಟು ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಬಿದ್ದಾಪುರ ಕಾಲೋನಿಯಲ್ಲಿ ಸಂಭವಿಸಿದೆ.
ಮೃತರನ್ನು ಡಬರಾಬಾದ್ ಕ್ರಾಸ್ ನಿವಾಸಿ ಕಸ್ತೂರಿ (21) ಎಂದು ಗುರುತಿಸಲಾಗಿದೆ.
ಕಸ್ತೂರಿ ಅವರು ಕಳೆದ ಗುರುವಾರ ಕಾಲೇಜು ಮುಗಿಸಿಕೊಂಡು ಮನೆಗೆ ಬಂದ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


