ಅಪರಾಧಜಿಲ್ಲಾಸುದ್ದಿ

ತಲೆಗೆ ಕಲ್ಲು ಎತ್ತಿಹಾಕಿ ಅಣ್ಣನಿಂದ ತಮ್ಮನ ಕೊಲೆ

ಕುಡಿದ ಮತ್ತಿನಲ್ಲಿ ಅಣ್ಣ-ತಮ್ಮನ ನಡುವೆ ಜಗಳ; ಬಸವಕಲ್ಯಾಣ ತಾಲ್ಲೂಕಿನ ಶಿವಪುರದಲ್ಲಿ ಘಟನೆ

ಬೀದರ್, ಸೆ.30- ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಅಣ್ಣ-ತಮ್ಮನ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.

ಶಿವಪುರ ಗ್ರಾಮದ 20 ವರ್ಷದ ಸಚಿನ್ ಮೃತ ಯುವಕ. ಆತನ ಅಣ್ಣ ನಿತಿನ್ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಕುಟುಂಬದ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆಂದಿನಿಂದಲೇ ಅಣ್ಣ-ತಮ್ಮನ ನಡುವೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ತಡರಾತ್ರಿ ಇಬ್ಬರೂ ಕುಡಿದ ಮತ್ತಿನಲ್ಲಿದ್ದಾಗ ಮತ್ತೆ ಜಗಳ ಆರಂಭವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ.

ಆಗ ನಿತಿನ್ ತನ್ನ ತಮ್ಮ ಸಚಿನ್‌ನ ತಲೆಯ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಚಿನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬಸವಕಲ್ಯಾಣ ನಗರ ಠಾಣೆಯ ಪಿಎಸ್‌ಐ ಚಂದ್ರಶೇಖರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button