ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ

ಕಲಬುರಗಿ, ಅ.೧: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅಕ್ಟೋಬರ್ ೨ರಂದು ಬೆಳಿಗ್ಗೆ ೧೦ ಗಂಟೆಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ಜನ್ಮದಿನವನ್ನು ಜಯಂತಿ ಕಾರ್ಯಕ್ರಮವಾಗಿ ಆಚರಿಸಲಾಗುವುದು ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಡಾ. ಕಿರಣ್ ಎ. ದೇಶಮುಖ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ದಾರ್ಶನಿಕ ಹಾಗೂ ಮನೋವೈಜ್ಞಾನಿಕ ತತ್ವಗಳ ಕುರಿತು ಮನೋವಿಜ್ಞಾನ ಪ್ರಾಧ್ಯಾಪಕ ಡಾ. ರುದ್ರವಾರ ವೆಂಕಟರೆಡ್ಡಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ–ಮಂಡಳಿ–ಪ್ರಾಧಿಕಾರಗಳ ಅಧ್ಯಕ್ಷರು, ಮುಖಂಡರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು, ಡಿಸಿಸಿ ಡೆಲಿಗೇಟ್ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯ ವಿವಿಧ ಮುಂಚೂಣಿ ಘಟಕಗಳು ಮತ್ತು ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಎಪಿಎಂಸಿಯ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಮಹಾನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಮಹಾಪೌರರು, ಉಪ ಮಹಾಪೌರರು ಮತ್ತು ಸದಸ್ಯರು, ಮಹಿಳೆಯರು ಹಾಗೂ ಯುವಕರು ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಡಾ. ಕಿರಣ್ ಎ. ದೇಶಮುಖ್ ಮನವಿ ಮಾಡಿದ್ದಾರೆ.



