ಜಿಲ್ಲಾಸುದ್ದಿ

ಚಿತ್ತಾಪುರ ಹೊಂಗಿರಣ ಹಿರಿಯ ನಾಗರಿಕರ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

ಚಿತ್ತಾಪುರ, ಅ.2- ಕಲಬುರಗಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ–2026ರ ಕಾರ್ಯಕ್ರಮದಲ್ಲಿ ಚಿತ್ತಾಪುರ ತಾಲ್ಲೂಕಿನ ಹೊಂಗಿರಣ ಹಿರಿಯ ನಾಗರಿಕರ ಹಾಗೂ ವಯೋವೃದ್ಧರ ಕ್ಷೇಮಾಭಿವೃದ್ಧಿ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಅವರು ಸಂಘದ ಅಧ್ಯಕ್ಷ ಮೊಹಮ್ಮದ್ ಇಬ್ರಾಹಿಂ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಅರುಣಕುಮಾರ ಲೋಯಾ ಹಾಗೂ ಹಿರಿಯ ನ್ಯಾಯವಾದಿ ರಾಜೇ ಶಿವಶರಣಪ್ಪ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದರು.

ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಂಘವು ಸಲ್ಲಿಸಿರುವ ಉತ್ತಮ ಸೇವೆಯನ್ನು ಪರಿಗಣಿಸಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ–2026ರ ಅಂಗವಾಗಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ್ ತಿಳಿಸಿದ್ದಾರೆ.

ಹಿರಿಯ ನಾಗರಿಕರ ಹಕ್ಕುಗಳು, ಅವರ ಕಲ್ಯಾಣ ಹಾಗೂ ಕ್ಷೇಮಾಭಿವೃದ್ಧಿಗಾಗಿ ಸಂಘವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾ ಮಟ್ಟದ ಪ್ರಶಸ್ತಿ ದೊರೆತಿರುವುದು ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳಲ್ಲಿ ಸಂತಸ ಮೂಡಿಸಿದೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button