ಮಹಾತ್ಮ ಗಾಂಧೀಜಿ ಆದರ್ಶಗಳ ಪಾಲನೆಗೆ ಡಾ. ರುದ್ರವಾರ ವೆಂಕಟರೆಡ್ಡಿ ಕರೆ

ಕಲಬುರಗಿ, ಅ.2- ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಮನೋವಿಜ್ಞಾನ ಪ್ರಾಧ್ಯಾಪಕ ಡಾ. ರುದ್ರವಾರ ವೆಂಕಟರೆಡ್ಡಿ ಕರೆ ನೀಡಿದರು.
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಹಾತ್ಮ ಗಾಂಧೀಜಿಯವರ ದಾರ್ಶನಿಕ ಹಾಗೂ ಮನೋವೈಜ್ಞಾನಿಕ ತತ್ವಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಮಹಾತ್ಮ ಗಾಂಧೀಜಿಯವರು ಸಾರಿದ ಸ್ವಾತಂತ್ರ್ಯ, ಸತ್ಯ, ಅಹಿಂಸೆ ಹಾಗೂ ಸರಳತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಪಾಲಿಸಿಕೊಂಡು ಹೋಗಬೇಕು. ಗಾಂಧೀಜಿಯವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿವೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕಿರಣ ಎ. ದೇಶಮುಖ, ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ, ಉತ್ತರ ಕ್ಷೇತ್ರದ ಶಾಸಕಿ ಶ್ರೀಮತಿ ಕನೀಜ್ ಫಾತಿಮಾ, ಜೆಸ್ಕಾಂ ಅಧ್ಯಕ್ಷ ಪ್ರವೀಣಕುಮಾರ ಪಾಟೀಲ ಹರವಾಳ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಅರುಣಕುಮಾರ ಎಂ.ವೈ. ಪಾಟೀಲ, ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷೆ ಹಾಗೂ ಮಾಜಿ ಮೇಯರ್ ಶ್ರೀಮತಿ ಚಂದ್ರಿಕಾ ಪರಮೇಶ್ವರ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲಿಂಗರಾಜ ತಾರಫೈಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕಗಳ ಅಧ್ಯಕ್ಷ ಶಕೀಲ್ ಅಹ್ಮದ್ ಸರಡಗಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಣುಕಾ ಸಿಂಗ್, ಗೌತಮ್ ಕರೇಕಲ್, ಭೂಪೇಂದ್ರಸಿಂಗ್ ಹಜಾರೆ, ಆಲಮಖಾನ್, ಬಾಬುರಾವ್ ಜಾಗೀರದಾರ, ರಾಜಗೋಪಾಲರೆಡ್ಡಿ, ಶಾಮರಾವ್ ನಾಟೀಕಾರ್, ಮಜರ್ ಹುಸೇನ್, ಆರ್.ಕೆ. ಹುಡಗಿ, ವಾಣಿಶ್ರೀ ಸಾಗರಕರ್, ಶಿವಕುಮಾರ್ ಬಾಳಿ, ಸವಿತಾ ಹಣಮಂತ ಒಂಟಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.



