ಜಿಲ್ಲಾಸುದ್ದಿ

ಮುಂಬೈಗೆ ಹೋಗಿದ್ದ ವೇಳೆ ಮನೆ ಬೀಗ ಮುರಿದು ಚಿನ್ನಾಭರಣ ಕಳವು

ಕಲಬುರಗಿ, ಅ.2– ಅಕ್ಕನ ಅನಾರೋಗ್ಯದ ನಿಮಿತ್ತ ಮುಂಬೈಗೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಸುಮಾರು ₹1.45 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ನಗರದ ಚಿಂಚೋಳಿ ಬಡಾವಣೆಯಲ್ಲಿ ನಡೆದಿದೆ.

ಚಿಂಚೋಳಿ ಬಡಾವಣೆಯ ನಿವಾಸಿ ಶರಣಬಸಪ್ಪ ತಂದೆ ಮಾರುತಿರಾವ್ ಜಮಾದಾರ್ ಅವರು ಅಕ್ಕನ ಅನಾರೋಗ್ಯದ ಹಿನ್ನೆಲೆಯಲ್ಲಿ ಮನೆಯ ಬಾಗಿಲಿಗೆ ಬೀಗ ಹಾಕಿಕೊಂಡು ಮುಂಬೈಗೆ ತೆರಳಿದ್ದರು. ಈ ವೇಳೆ ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.

ಕಳ್ಳತನವಾಗಿರುವ ವಸ್ತುಗಳಲ್ಲಿ ಸುಮಾರು ₹1 ಲಕ್ಷ ಮೌಲ್ಯದ ಚಿನ್ನದ ಬೋರಮಾಳ, ₹30 ಸಾವಿರ ಮೌಲ್ಯದ ಚಿನ್ನದ ಸುತ್ತುಗುರು ಹಾಗೂ ₹15 ಸಾವಿರ ನಗದು ಸೇರಿವೆ. ಒಟ್ಟು ಸುಮಾರು ₹1.45 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳುವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮನೆಗೆ ವಾಪಸ್‌ ಬಂದ ಬಳಿಕ ಬೀಗ ಮುರಿದಿರುವುದನ್ನು ಗಮನಿಸಿದ ಶರಣಬಸಪ್ಪ ಅವರು ಪರಿಶೀಲಿಸಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಆರ್‌.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳತನ ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಮನೆಯ ಸುತ್ತಮುತ್ತಲಿನ ಪ್ರದೇಶ ಹಾಗೂ ಲಭ್ಯವಿರುವ ಸುಳಿವುಗಳ ಆಧಾರದ ಮೇಲೆ ಕಳ್ಳರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button