ಜಿಲ್ಲಾಸುದ್ದಿ

ಕಲಬುರಗಿ ಪಾಲಿಕೆ ವಿರೋಧ ಪಕ್ಷದ ನಾಯಕರಾಗಿ ಕೃಷ್ಣ ನಾಯಕ ಪದಗ್ರಹಣ

ಕಲಬುರಗಿ, ಅ.3- ಮಹಾನಗರ ಪಾಲಿಕೆಯ ನೂತನ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿ ಸದಸ್ಯ ಕೃಷ್ಣ ನಾಯಕ ಅವರು ಶನಿವಾರ ಮಹಾನಗರ ಪಾಲಿಕೆಯ ತಮ್ಮ ಕಚೇರಿಯಲ್ಲಿ ಪದಗ್ರಹಣ ಮಾಡಿದರು.

ಈ ಸಂದರ್ಭದಲ್ಲಿ ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಚಂದು ಪಾಟೀಲ, ಮಾಜಿ ಸಂಸದ ಡಾ. ಉಮೇಶ್ ಜಾಧವ್, ಶಾಸಕರಾದ ಬಸವರಾಜ ಮತ್ತಿಮೂಡ, ಡಾ. ಬಿ.ಜಿ. ಪಾಟೀಲ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ, ಮುಖಂಡರಾದ ರಾಜಕುಮಾರ ಚವ್ಹಾಣ್, ಉಮೇಶ್ ಜಾಧವ್, ಉಮೇಶ್ ಪಾಟೀಲ, ವಿಶಾಲ್ ದರ್ಗಿ, ವಾಲ್ಮೀಕಿ ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪದಗ್ರಹಣದ ಬಳಿಕ ಮಾತನಾಡಿದ ನೂತನ ವಿರೋಧ ಪಕ್ಷದ ನಾಯಕ ಕೃಷ್ಣ ನಾಯಕ, ಮಹಾನಗರ ಪಾಲಿಕೆಯ ಆಡಳಿತದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರ ಮತ್ತು ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಈಗಾಗಲೇ ಹೋರಾಟ ನಡೆಸುತ್ತಿದೆ ಎಂದು ಆರೋಪಿಸಿದರು.

ಮಹಾನಗರ ಪಾಲಿಕೆಯ ಒಳಗೆ ಹಾಗೂ ಹೊರಗೆ ವಿರೋಧ ಪಕ್ಷವು ಜನಪರವಾಗಿ ಕಾರ್ಯನಿರ್ವಹಿಸಲಿದೆ. ಅಗತ್ಯವಿದ್ದಲ್ಲಿ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.

ನಗರದಲ್ಲಿ ಹಲವು ಮೂಲಭೂತ ಸಮಸ್ಯೆಗಳು ಮುಂದುವರಿದಿವೆ. ಹದಗೆಟ್ಟ ರಸ್ತೆಗಳ ದುರಸ್ತಿ ಸಮರ್ಪಕವಾಗಿ ನಡೆಯುತ್ತಿಲ್ಲ. ಚರಂಡಿ ವ್ಯವಸ್ಥೆ ಹದಗೆಟ್ಟಿದ್ದರೂ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿಲ್ಲ. ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿಯೂ ಸಮಸ್ಯೆಗಳಿವೆ. ಹಲವು ಪ್ರದೇಶಗಳಲ್ಲಿ ಬೀದಿ ದೀಪಗಳ ಸಮಸ್ಯೆ ಕಂಡುಬರುತ್ತಿದೆ ಎಂದು ಕೃಷ್ಣ ನಾಯಕ ಹೇಳಿದರು.

ನಗರದ ನಾಗರಿಕ ಸೌಲಭ್ಯಗಳ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಆಡಳಿತದ ಮೇಲೆ ವಿರೋಧ ಪಕ್ಷ ಒತ್ತಡ ತರಲಿದೆ ಎಂದು ಅವರು ತಿಳಿಸಿದರು.

ಹದಗೆಟ್ಟ ರಸ್ತೆ ದುರಸ್ತಿ ಕಾಮಗಾರಿಗಳಲ್ಲಿಯೂ ಮಣ್ಣು ಮುಚ್ಚಿ ಕಳಪೆ ಕಾಮಗಾರಿ ನಡೆಸಲಾಗುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ಹಲವು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ನಾಗರಿಕರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುವ ಮೂಲಕ ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷ್ಣ ನಾಯಕ ಭರವಸೆ ನೀಡಿದರು.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button