ಬೀದರ್ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶರದಕುಮಾರ ಘಂಟೆ ನೇಮಕ

ಬೀದರ್, ಅ.5– ಕರ್ನಾಟಕ ಸರ್ಕಾರದಿಂದ ಅಧಿಕೃತ ಮಾನ್ಯತೆ ಪಡೆದ ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಶರದಕುಮಾರ ಘಂಟೆ ಅವರನ್ನು ನೇಮಕ ಮಾಡಲಾಗಿದೆ.
ಇತ್ತೀಚೆಗೆ ನಡೆದ ಸಂಘದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ರಾಜ್ಯ ಅಧ್ಯಕ್ಷರ ನೇತೃತ್ವದಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಕಲಬುರಗಿ ಜಿಲ್ಲಾ ಘಟಕದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ ನೇಮಕಾತಿಗೆ ಅಧಿಕೃತ ಅನುಮೋದನೆ ನೀಡಲಾಗಿದೆ.
ಕರ್ನಾಟಕ ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘವು ಸರ್ಕಾರದಿಂದ ಮಾನ್ಯತೆ ಪಡೆದಿದ್ದು, ಸರ್ಕಾರದ ಆದೇಶ ಸಂಖ್ಯೆ ಎಚ್.ಡಿ. 72 ಪಿಐಎ 81, ಬೆಂಗಳೂರು, ದಿನಾಂಕ 23 ಅಕ್ಟೋಬರ್ 1981ರಂತೆ ಕಾರ್ಯನಿರ್ವಹಿಸುತ್ತಿದೆ.
ಶರದಕುಮಾರ ಘಂಟೆ ಅವರನ್ನು ಬೀದರ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿರುವುದನ್ನು ರಾಜ್ಯ ಕಾರ್ಯಕಾರಿ ಸಭೆಯಲ್ಲಿ ಘೋಷಿಸಲಾಯಿತು. ಸಭೆಯಲ್ಲಿ ಸಂಘದ ರಾಜ್ಯಮಟ್ಟದ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ನೂತನ ಜಿಲ್ಲಾ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಂಘಟನೆಯ ಬಲವರ್ಧನೆ ಕುರಿತು ಚರ್ಚೆ ನಡೆಯಿತು.
ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್ ಅವರು ಶರದಕುಮಾರ ಘಂಟೆ ಅವರನ್ನು ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಿ ಅಭಿನಂದಿಸಿದರು. ಜಿಲ್ಲೆಯ ಸಣ್ಣ ಹಾಗೂ ಜಿಲ್ಲಾ ಪತ್ರಿಕೆಗಳ ಸಮಸ್ಯೆಗಳಿಗೆ ಸ್ಪಂದಿಸುವುದು, ಪತ್ರಕರ್ತರ ಹಿತಾಸಕ್ತಿಗಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದು ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಅವರು ಶುಭ ಹಾರೈಸಿದರು.
ನೂತನ ಜಿಲ್ಲಾ ಅಧ್ಯಕ್ಷರ ನೇಮಕಕ್ಕೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.



