ಜಿಲ್ಲಾಸುದ್ದಿ
ಹೊನಗುಂಟದ ಚಂದ್ರಲಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ

ಅ.10ರಿಂದ ಅ.20ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ
ಕಲಬುರಗಿ, ಅ.5– ಜಿಲ್ಲೆಯ ಹೊನಗುಂಟ ಗ್ರಾಮದ ಶ್ರೀ ಚಂದ್ರಲಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅಕ್ಟೋಬರ್ 10ರಿಂದ 20ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ನವರಾತ್ರಿ ಉತ್ಸವದ ಅಂಗವಾಗಿ ಪ್ರತಿದಿನ ಬೆಳಿಗ್ಗೆ ದೇವಿಗೆ ವಿಶೇಷ ಅಭಿಷೇಕ, ಅಲಂಕಾರ, ನೈವೇದ್ಯ, ನಂದಾದೀಪ ಸೇರಿದಂತೆ ವಿವಿಧ ಧಾರ್ಮಿಕ ಸೇವೆಗಳು ನೆರವೇರಲಿವೆ.
ಉತ್ಸವದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ, ತನು–ಮನ–ಧನದಿಂದ ಸೇವೆ ಸಲ್ಲಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನದ ಅರ್ಚಕ ಅವಧೂತ ಭಟ್ ಅವರು ಮನವಿ ಮಾಡಿದ್ದಾರೆ.



