ಜಿಲ್ಲಾಸುದ್ದಿ

ಎನ್.ಎ. ಹ್ಯಾರಿಸ್ ನೇತೃತ್ವದಲ್ಲಿ ಇಂದು ಕಲಬುರಗಿಯಲ್ಲಿ ಕಾಂಗ್ರೆಸ್ ಸಭೆ

ಕಲಬುರಗಿ, ಅ. 6: ಕರ್ನಾಟಕ ಅಲ್ಪಸಂಖ್ಯಾತರ ಶಾಸಕರ ವೇದಿಕೆ ಅಧ್ಯಕ್ಷ ಎನ್.ಎ. ಹ್ಯಾರಿಸ್ ಅವರು ಅಕ್ಟೋಬರ್ 7ರಂದು ಕಲಬುರಗಿ ನಗರಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ನೂತನ ಜಿಲ್ಲಾ ಅಧ್ಯಕ್ಷ ಡಾ. ಕಿರಣ್ ಎ. ದೇಶಮುಖ್ ತಿಳಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ–ಮಂಡಳಿ–ಪ್ರಾಧಿಕಾರಗಳ ಅಧ್ಯಕ್ಷರು, ಪಕ್ಷದ ಮುಖಂಡರು, ಕೆಪಿಸಿಸಿ ಹಾಗೂ ಡಿಸಿಸಿ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು, ಡಿಸಿಸಿ ಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯ ವಿವಿಧ ಮುಂಚೂಣಿ ಘಟಕಗಳು ಮತ್ತು ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಎಪಿಎಂಸಿ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಮಹಾನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಮಹಾಪೌರರು, ಉಪ ಮಹಾಪೌರರು ಮತ್ತು ಸದಸ್ಯರು ಸೇರಿದಂತೆ ಪಕ್ಷದ ವಿವಿಧ ಹಂತದ ಮುಖಂಡರು ಸಭೆಗೆ ಆಗಮಿಸಲಿದ್ದಾರೆ.

ಮಹಿಳಾ ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಡಾ. ಕಿರಣ್ ಎ. ದೇಶಮುಖ್ ಮನವಿ ಮಾಡಿದ್ದಾರೆ.

sswnews

https://sswnewskannada.com

Related Articles

Leave a Reply

Your email address will not be published. Required fields are marked *

Back to top button